ಕಾರುಗಳ ಮೇಲೆ ಆಕರ್ಷಕ ರಿಯಾಯಿತಿ ಘೋಷಣೆ
ನವದೆಹಲಿ, 22 ಏಪ್ರಿಲ್ (ಹಿ.ಸ):ಆ್ಯಂಕರ್:ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂ
Hyundai Offers Significant Discounts And Benef


ನವದೆಹಲಿ, 22 ಏಪ್ರಿಲ್ (ಹಿ.ಸ):ಆ್ಯಂಕರ್:ಮಧ್ಯಮ ಕ್ರಮಾಂಕದ ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಇಂಡಿಯಾ ಕಂಪನಿಯು ತನ್ನ ಪ್ರಮುಖ ಕಾರುಗಳ ಖರೀದಿಯ ಮೇಲೆ ಆಕರ್ಷಕ ಆಫರ್ ಗಳನ್ನು ನೀಡುತ್ತಿದ್ದು, ಹೊಸ ರಿಯಾಯಿತಿ ಗಳಲ್ಲಿ ಕಂಪನಿಯು ಕ್ಯಾಶ್ ಬ್ಯಾಕ್, ಎಕ್ಸ್ ಚೆಂಜ್ ಮತ್ತು ಕಾರ್ಪೊರೇಟ್ ಡಿಸ್ಕೌಂಟ್ ಗಳನ್ನು ನೀಡುತ್ತಿದೆ. ಹೊಸ ಆಫರ್ ಗಳಲ್ಲಿ ಗ್ರಾಹಕರ ವಿವಿಧ ಕಾರು ಮಾದರಿಗಳನ್ನು ಆಧರಿಸಿ ರೂ. 30 ಸಾವಿರದಿಂದ ರೂ. 2 ಲಕ್ಷ ತನಕ ಆಫರ್ ಪಡೆದುಕೊಳ್ಳಬಹುದಾಗಿದ್ದು, ಯಾವ ಕಾರಿನ ಮೇಲೆ ಎಷ್ಟು ಪ್ರಮಾಣದ ಆಫರ್ ಲಭ್ಯವಿದೆ ಎನ್ನುವ ಮಾಹಿತಿ ಇಲ್ಲಿದೆ.

ವೆನ್ಯೂ ಮತ್ತು ವೆನ್ಯೂ ಎನ್ ಲೈನ್

ಹೊಸ ಆಫರ್ ಗಳಲ್ಲಿ ಹ್ಯುಂಡೈ ಕಂಪನಿಯು ವೆನ್ಯೂ ಮತ್ತು ವೆನ್ಯೂ ಎನ್ ಲೈನ್ ಕಾರುಗಳ ಮೇಲೆ ಆಕರ್ಷಕ ಆಫರ್ ಘೋಷಣೆ ಮಾಡಿದ್ದು, ವೆನ್ಯೂ ಎನ್ ಲೈನ್ ಮೇಲೆ ರೂ. 30 ಸಾವಿರ ಮತ್ತು ಸಾಮಾನ್ಯ ವೆನ್ಯೂ ಮೇಲೆ ರೂ. 35 ಸಾವಿರದಷ್ಟು ಆಫರ್ ನೀಡುತ್ತಿದೆ. ಹೊಸ ಆಫರ್ ಗಳಲ್ಲಿ ಎಕ್ಸ್ ಚೆಂಜ್ ಬೋನಸ್ ಮತ್ತು ಕ್ಯಾಶ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಸಾಮಾನ್ಯ ವೆನ್ಯೂ ಡೀಸೆಲ್ ಹೊರತುಪಡಿಸಿ ಇನ್ನುಳಿದ ಎಲ್ಲಾ ವೆರಿಯೆಂಟ್ ಗಳಿಗೆ ಆಫರ್ ಅನ್ವಯಿಸುತ್ತದೆ.

ವೆನ್ಯೂ ಮತ್ತು ವೆನ್ಯೂ ಎನ್ ಲೈನ್ ಕಾರುಗಳು 1.0 ಲೀಟರ್ ಟರ್ಬೊ ಪೆಟ್ರೋಲ್, 1.2 ಲೀಟರ್ ಎನ್ಎ ಪೆಟ್ರೋಲ್ ಮತ್ತು 1.5 ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, ಇವು ಎಕ್ಸ್ ಶೋರೂಂ ಪ್ರಕಾರ ರೂ. 7.94 ಲಕ್ಷದಿಂದ 13.48 ಲಕ್ಷ ಮತ್ತು ರೂ. 12.08 ಲಕ್ಷದಿಂದ ರೂ. 13.90 ಲಕ್ಷ ಬೆಲೆ ಹೊಂದಿವೆ.

ಹಿಂದೂಸ್ತಾನ್ ಸಮಾಚಾರ್


 rajesh pande