ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟನ್ಸ್ಗೆ ೩ ವಿಕೆಟ್ ಜಯ,ರಾಜಸ್ಥಾನ ರಾಯಲ್ಸ್ - ಮುಂಬೈ ಇಂಡಿಯನ್ಸ್ ಮುಖಾಮುಖಿ
ಚಂಡೀಗಢ, 22 ಏಪ್ರಿಲ್ (ಹಿ.ಸ):ಆ್ಯಂಕರ್:ಚಂಡೀಗಢದ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ
PL 2024: RCB Sets Highest All Out Totals In T20 Cricket


ಚಂಡೀಗಢ, 22 ಏಪ್ರಿಲ್ (ಹಿ.ಸ):ಆ್ಯಂಕರ್:ಚಂಡೀಗಢದ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಮೂರು ವಿಕೆಟ್ಗಳಿಂದ ಜಯ ಸಾಧಿಸಿದೆ. ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪಂಜಾಬ್ ಕಿಂಗ್ಸ್ ೨೦ ಓವರ್ಗಳಲ್ಲಿ ೧೪೨ ರನ್ಗಳಿಸಿ ಸರ್ವಪತನ ಕಂಡಿತು. ೨೧ ಎಸೆತಗಳಲ್ಲಿ ೩೫ ರನ್ ಗಳಿಸಿದ ಪ್ರಭಸಿiನ್ ಸಿಂಗ್ ಪಂಜಾಬ್ ಪರ ಗರಿಷ್ಠ ರನ್ ಗಳಿಸಿದರು. ಗುಜರಾತ್ ಪರ ಆರ್. ಸಾಯಿ ಕಿಶೋರ್ ನಾಲ್ಕು ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ೧೪೩ ರನ್ ಗುರಿ ಬೆನ್ನತ್ತಿದ ಗುಜರಾತ್ ೧೯.೧ ಓವರ್ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ ೧೪೬ ರನ್ ಗಳಿಸಿ ಗೆಲುವಿನ ನಗೆಬೀರಿತು. ನಿನ್ನೆ ಮಧ್ಯಾಹ್ನ ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಒಂದು ರನ್ನಿಂದ ಸೋಲಿಸಿತು. ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿಂದು ನಡೆಯಲಿರುವ ಐಪಿಎಲ್ ಟಿ-೨೦ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡ, ಮುಂಬೈ ಇಂಡಿಯನ್ಸ್ ತಂಡದೊಂದಿಗೆ ಸೆಣಸಲಿದೆ. ಪಂದ್ಯ ಸಂಜೆ ೭:೩೦ ಕ್ಕೆ ಆರಂಭವಾಗಲಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande