'ಕಲ್ಕಿ'ಯಲ್ಲಿ 'ಅಶ್ವತ್ಥಾಮ'ನಾಗಿ ಅಮಿತಾಭ್ ನಟನೆ
ಮುಂಬೈ, 22 ಏಪ್ರಿಲ್ (ಹಿ.ಸ):ಆ್ಯಂಕರ್:ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ನಟನೆಯ ‘ಕಲ್ಕಿ 2898 ಎಡಿ’
‘ಕಲ್ಕಿ’ಯಲ್ಲಿ ‘ಅಶ್ವತ್ಥಾಮ’ನಾಗಿ ಬಂದ ಅಮಿತಾಭ್


ಮುಂಬೈ, 22 ಏಪ್ರಿಲ್ (ಹಿ.ಸ):ಆ್ಯಂಕರ್:ಪ್ರಭಾಸ್, ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ ರಿಲೀಸ್ಗೂ ಮೊದಲೇ ಗಮನ ಸೆಳೆದಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಅಮಿತಾಭ್ ಬಚ್ಚನ್ ಅವರ ಪಾತ್ರ ಹೇಗಿರಲಿದೆ ಎನ್ನುವುದನ್ನು ತಂಡ ರಿವೀಲ್ ಮಾಡಿದೆ. ಅಶ್ವತ್ಥಾಮನಾಗಿ ಅಮಿತಾಭ್ ಬಚ್ಚನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ.

ಈ ಮೊದಲು ರಿಲೀಸ್ ಆದ ‘ಕಲ್ಕಿ 2898 ಎಡಿ’ ಸಿನಿಮಾದ ಟೀಸರ್ನಲ್ಲಿ ಪ್ರಭಾಸ್ ಅವರನ್ನು ಹೈಲೈಟ್ ಮಾಡಲಾಗಿತ್ತು. ಅಮಿತಾಭ್ ಬಚ್ಚನ್ ಅವರು ಹೀಗೆ ಬಂದು ಹಾಗೆ ಹೋಗಿದ್ದರು. ಆದರೆ, ಈಗ ಅವರ ಸಂಪೂರ್ಣ ಪಾತ್ರ ಪರಿಚಯ ಮಾಡಲಾಗಿದೆ. ಮಹಾಭಾರತದ ಅಶ್ವಾತ್ಥಾಮನಾಗಿ ಅವರು ಕಾಣಿಸಿಕೊಂಡಿದ್ದಾರೆ. ‘ಮಹಾಭಾರತದಿಂದ ಸಿನಿಮಾದ ಕಥೆ ಆರಂಭ ಆಗಲಿದೆ’ ಎಂದು ನಿರ್ದೇಶಕ ನಾಗ್ ಅಶ್ವಿನ್ ಅವರು ಈ ಮೊದಲು ಹೇಳಿಕೊಂಡಿದ್ದರು.

‘ಕಲ್ಕಿ 2898 ಎಡಿ’ ಸಿನಿಮಾದ ಪಾತ್ರವರ್ಗ ದೊಡ್ಡದಿದೆ. ಪ್ರಭಾಸ್ ಜೊತೆ ಅಮಿತಾಭ್ ಬಚ್ಚನ್, ದೀಪಿಕಾ ಪಡುಕೋಣೆ, ಕಮಲ್ ಹಾಸನ್ ಸೇರಿ ಅನೇಕರು ನಟಿಸುತ್ತಿದ್ದಾರೆ. ಈ ಚಿತ್ರದ ಬಜೆಟ್ ತುಂಬಾನೇ ದೊಡ್ಡದಾಗಿದೆ. ಸಿನಿಮಾ ದೊಡ್ಡ ಯಶಸ್ಸು ಕಂಡರೆ ಮಾತ್ರ ನಿರ್ಮಾಪಕರು ಗೆಲುವು ಕಾಣಲಿದ್ದಾರೆ. ಸದ್ಯ ಅಮಿತಾಭ್ ಬಚ್ಚನ್ ಅವರನ್ನು ಪರಿಚಯಿಸೋ ಟೀಸರ್ ನೋಡಿದವರಿಗೆ ಮತ್ತೊಂದು ಕುತೂಹಲವೂ ಮೂಡಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande