ಕಟ್ಟುನಿಟ್ಟಿನ ಮಾರ್ಗಸೂಚಿಗಳ ಪಾಲನೆಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸಲಹೆ
ಕೋಲಾರ, ೨೩ ಏಪ್ರಿಲ್ (ಹಿ.ಸ) : ಆ್ಯಂಕರ್ : ಲೋಕಸಭಾ ಚುನಾವಣೆ-೨೦೨೪ರ ಮತದಾನಕ್ಕಿಂತ ಮೊದಲ ೭೨ ಹಾಗೂ ೪೮ ಗಂಟೆಗಳ ಅವಧಿ
ಕಟ್ಟುನಿಟ್ಟಿನ ಮಾರ್ಗಸೂಚಿಗಳ ಪಾಲನೆಗೆ ಜಿಲ್ಲಾಧಿಕಾರಿ ಅಕ್ರಂ ಪಾಷ ಸಲಹೆ


ಕೋಲಾರ, ೨೩ ಏಪ್ರಿಲ್ (ಹಿ.ಸ) :

ಆ್ಯಂಕರ್ : ಲೋಕಸಭಾ ಚುನಾವಣೆ-೨೦೨೪ರ ಮತದಾನಕ್ಕಿಂತ ಮೊದಲ ೭೨ ಹಾಗೂ ೪೮ ಗಂಟೆಗಳ ಅವಧಿಯಲ್ಲಿ ನಿರ್ವಹಿಸಬೇಕಾದ ಕಾರ್ಯಗಳ ಕುರಿತು ಭಾರತ ಚುನಾವಣಾ ಆಯೋಗವು ಬಿಡುಗಡೆಗೊಳಿಸಿದ ಮಾರ್ಗದರ್ಶಿ ಸೂತ್ರಗಳನ್ನು ಪಾಲನೆ ಮಾಡಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಅಕ್ರಂ ಪಾಷ ಅವರು ಜಿಲ್ಲೆಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಕೇಶ್ವಾನ್ ಹಾಲ್ ರಲ್ಲಿ ಇಂದು ವಿಡಿಯೋ ಸಂವಾದ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಮತದಾನಕ್ಕೆ ಇದೀಗ ಕೆಲವೇ ದಿನಗಳು ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕೆಲವು ಪ್ರಮುಖ ಅಂಶಗಳನ್ನು ಪಾಲನೆ ಮಾಡಲು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರಗಳ ಚುನಾವಣಾಧಿಕಾರಿಗಳು, ತಮ್ಮ ಹಂತದಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ತಂಡವಾಗಿಸಿ ಆಯಾ ಕಡೆಗಳಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿದರು. ಮದುವೆ ಮತ್ತು ಮುಂತಾದ ಸಭೆ-ಸಮಾರಂಭಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದ0ತೆ ಎಚ್ಚರಿಕೆ ವಹಿಸಲು ಸೂಚಿಸಿದರು. ಮತದಾರರನ್ನು ಸೆಳೆಯಲು ಯಾವುದೇ ರೀತಿಯ ಭೋಜನ ಕೂಟಗಳನ್ನು ನಡೆಸದಂತೆ ನಿರ್ಬಂಧಿಸಬೇಕು ಎಂದರು.

ಎಲ್ಲಾ ಫ್ಲಾಯಿಂಗ್ ಸ್ಕ್ವಾಡಗಳು ಚುನಾವಣಾ ವೆಚ್ಚ, ಮಾದರಿ ನೀತಿ ಸಂಹಿತೆ ಇತ್ಯಾದಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮತ್ತು ಚೆಕ್ಪೋಸ್ಟಗಳಲ್ಲಿ ತಪಾಸಣೆಯನ್ನು ಚುರುಕುಗೊಳಿಸಿ, ಉಲ್ಲಂಘನೆಗಳು ಕಂಡು ಬಂದಲ್ಲಿ ನಿರ್ಧಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲು ಸೂಚಿಸಿದರು.

ಮುಕ್ತ ಹಾಗೂ ನ್ಯಾಯಸಮ್ಮತ ಮತ್ತು ಶಾಂತಿಯುತ ಮತದಾನ ವ್ಹವಸ್ಥೆಗಾಗಿ ಜಿಲ್ಲಾಡಳಿತವು ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು, ಸಿಎಫಿಎಫ್ ಸಿಬ್ಬಂದಿ ಹಾಗೂ ಇತರೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು ಅವರೆಲ್ಲರೂ ಭಾರತೀಯ ದಂಡ ಸಂಹಿತೆ, ಜನಪ್ರತಿನಿಧಿ ಕಾಯಿದೆ ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಎಲ್ಲ ಚುನಾವಣಾಧಿಕಾರಿಗಳು ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದರು.

ಈ ೭೨ ತಾಸುಗಳು ಅತ್ಯಂತ ನಿರ್ಣಾಯಕವಾಗಿದ್ದು ಮತದಾರರಿಗೆ ಯಾವುದೇ ರೀತಿಯ ಆಸೆ ಆಮೀಷಗಳನ್ನು ಅಭ್ಯರ್ಥಿಗಳು ತೋರದಂತೆ ಚುನಾವಣಾಧಿಕಾರಿಗಳು ನಿಗಾ ವಹಿಸಬೇಕು. ಮತದಾನ ನಡೆಯುವ ಪೂರ್ವ ೭೨ ಗಂಟೆಗಳ ಅವಧಿಯಲ್ಲಿ ಕಾನೂನುಬಾಹೀರವಾಗಿ ಮದ್ಯವು ಮತದಾರರಿಗೆ ಸರಬರಾಜು ಆಗುವುದನ್ನು ತಡೆಯಲು ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಗೂ ಮಾದರಿ ನೀತಿ ಸಂಹಿತೆ ಜಾರಿ ಮಾಡುವ ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮಗೊಳ್ಳುವುದನ್ನು ಖಾತರಿಪಡಿಸಿಕೊಳ್ಳಬೇಕು ಎಂದು ಎಲ್ಲ ಸಹಾಯಕ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೆ ಮಾದರಿ ನೀತಿ ಸಂಹಿತೆ ಸಂಬ0ಧಿಸಿದ0ತೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಯಾವುದೇ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ವಿವಿಧ ಸಮುದಾಯಗಳಲ್ಲಿ ಧ್ವೇಷ ಭಾವನೆಗಳನ್ನು ಬಿತ್ತುವುದನ್ನು ತಡೆಯಲು ಕ್ರಮಕೈಗೊಳ್ಳಬೇಕು. ಮತಪ್ರಚಾರಕ್ಕಾಗಿ ಯಾವುದೇ ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳು ಸಾರ್ವಜನಿಕ ದೇವಸ್ಥಾನಗಳು, ಮಠ, ಮಂದಿರ, ಚರ್ಚು, ಮಸೀದಿ ಇತ್ಯಾದಿ ಧಾರ್ಮಿಕ ಕೇಂದ್ರಗಳನ್ನು ಉಪಯೋಗಿಸುವುದನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕು ಎಂದರು.

ಮತದಾನಕ್ಕಿ0ತ ಪೂರ್ವ ೪೮ ಗಂಟೆಗಳ ಅವಧಿಯಲ್ಲಿ ಮನೆಮನೆ ಪ್ರಚಾರದ ವೇಳೆಯಲ್ಲಿ ೫ಕ್ಕಿಂತ ಹೆಚ್ಚು ಜನರು ಸೇರದಂತೆ ಕ್ರಮಕೈಗೊಳ್ಳಲು, ೧೪೪ ಹಾಗೂ ಮದ್ಯಮಾರಾಟ ನಿಷೇಧ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಮತದಾನಕ್ಕಿಂತ ಪೂರ್ವ ೭೨ ಗಂಟೆಗಳು ಮತ್ತು ೪೮ ಗಂಟೆಗಳ ಅವಧಿಯಲ್ಲಿ ಪಾಲಿಸಬೇಕಾದ ಕ್ರಮಗಳ ಕುರಿತು ರಾಜಕೀಯ ಪಕ್ಷಗಳ ಮುಖಂಡರು ಮತ್ತು ಅಭ್ಯರ್ಥಿಗಳಿಗೆ ತಿಳಿಸಲು ಸೂಚಿಸಿದರು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪದ್ಮ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ. ನಾರಾಯಣ, ಕೆಜಿಎಫ್ ಪೊಲೀಸ್ ವರಿಷ್ಟಾಧಿಕಾರಿಗಳಾದ ಶಾಂತರಾಜು, ಅಪರ ಜಿಲ್ಲಾಧಿಕಾರಿಗಳಾದ ಡಾ. ಶಂಕರ ವಾಣಿಕ್ಯಾಳ್, ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರರು ಪೊಲೀಸ್ ಇಲಾಖಾಧಿಕಾರಿಗಳು ಮತ್ತು ಚುನಾವಣಾ ಶಾಖಾ ಸಿಬ್ಬಂದಿ ಉಪಸ್ಥಿತರಿದ್ದರು.


 rajesh pande