ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ
ನವದೆಹಲಿ, 23 ಏಪ್ರಿಲ್ (ಹಿ.ಸ):ಆ್ಯಂಕರ್:ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವ
122


ನವದೆಹಲಿ, 23 ಏಪ್ರಿಲ್ (ಹಿ.ಸ):ಆ್ಯಂಕರ್:ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ. ಇದಕ್ಕೂ ಮುನ್ನ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಇದಾದ ಬಳಿಕ ನ್ಯಾಯಾಲಯ ಮತ್ತೊಮ್ಮೆ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತ್ತು.

ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಇದೀಗ ಮೇ 7ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ. ಹಾಗೆಯೇ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನೂ ಕೂಡ ವಿಸ್ತರಿಸಲಾಗಿದೆ.

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಮುಖ್ಯಮಂತ್ರಿ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ. ಈ ಪ್ರಕರಣದಲ್ಲಿ ಕೇಜ್ರಿವಾಲ್ ಅವರು ವೈಯಕ್ತಿಕವಾಗಿಯೂ ಮತ್ತು ಎಎಪಿ ಪಕ್ಷದ ಸಂಚಾಲಕರಾಗಿಯೂ ಭಾಗಿಯಾಗಿದ್ದರು ಎಂಬುದು ತಿಳಿದುಬರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

ಹಿಂದೂಸ್ತಾನ್ ಸಮಾಚಾರ್


 rajesh pande