ಗಾನಕೋಗಿಲೆ ಎಸ್.ಜಾನಕಿ ಜನುಮದಿನ ಇಂದು
ಬೆಂಗಳೂರು, 23 ಏಪ್ರಿಲ್ (ಹಿ.ಸ):ಆ್ಯಂಕರ್:ಎಸ್.ಜಾನಕಿ ಭಾರತೀಯ ಚಿತ್ರರಂಗ ಕಂಡ ಅದ್ಭುತ ಗಾಯಕಿ, ಗೀತಸಾಹಿತಿ ಮತ್ತು ಸಂ
ಬೆಂಗಳೂರು, 23 ಏಪ್ರಿಲ್   (ಹಿ.ಸ):ಆ್ಯಂಕರ್:


ಬೆಂಗಳೂರು, 23 ಏಪ್ರಿಲ್ (ಹಿ.ಸ):ಆ್ಯಂಕರ್:ಎಸ್.ಜಾನಕಿ ಭಾರತೀಯ ಚಿತ್ರರಂಗ ಕಂಡ ಅದ್ಭುತ ಗಾಯಕಿ, ಗೀತಸಾಹಿತಿ ಮತ್ತು ಸಂಗೀತ ನಿರ್ದೇಶಕಿ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದಾರೆ. ತಮ್ಮ ಅದ್ಭುತ ಧ್ವನಿ ವೈವಿಧ್ಯಕ್ಕೆ ಹೆಸರಾಗಿರುವ ಇವರು ಚಿಕ್ಕ ಮಕ್ಕಳಂತೆ ಕೂಡ ಹಾಡಬಲ್ಲರು.

1938ರಲ್ಲಿ ಆಂಧ್ರಪ್ರದೇಶದ ಗುಂಟೂರಿನ ಹಳ್ಳಿಯಲ್ಲಿ ಜನಿಸಿದರು. ತಮ್ಮ ಮೂರನೆ ವಯಸ್ಸಿನಲ್ಲೇ ಸಂಗೀತಗಾರ್ತಿಯ ಸಕಲ ಸುಲಕ್ಷಣಗಳನ್ನೂ ಹೊರಹೊಮ್ಮಿಸಿದ ಬಾಲಕಿ ಜಾನಕಿ. ನಾದಸ್ವರ ವಿದ್ವಾನ್ ಶ್ರೀ ಪೈಡಿಸ್ವಾಮಿ ಎಂಬುವವರಲ್ಲಿ ಸಂಗೀತಾಭ್ಯಾಸ ಪ್ರಾರಂಭಿಸಿದರು.

ಸಂಗಿತ ಪಯಣ: 1956ರ ವರ್ಷದಲ್ಲಿ ಆಕಾಶವಾಣಿ ನಡೆಸಿದ ಸಂಗೀತ ಸ್ಪರ್ಧೆಗಳಲ್ಲಿ ಆಗಿನ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರಿಂದ ಬಹುಮಾನ ಸ್ವೀಕರಿಸಿದ ಜಾನಕಿ, ಮುಂದೆ ಚೆನ್ನೈಗೆ ಬಂದು ಸಂದರ್ಶನ ವೊಂದರಲ್ಲಿ ಲತಾ ಮಂಗೇಶ್ಕರ್ ಹಾಡಿದ್ದ `ರಸಿಕ್ ಬಲಮಾ’ ಎಂಬ ಸುಪ್ರಸಿದ್ಧ ಗೀತೆಯನ್ನು ಮನೋಜ್ಞವಾಗಿ ಹಾಡಿ ಪ್ರಸಿದ್ಧ ಎವಿಎಮ್ ಸಂಸ್ಥೆಯವರ ಕಾಂಟ್ರಾP್ಟï ಪಡೆದರು.

ತಮ್ಮ 19ನೆ ವಯಸ್ಸಿನಲ್ಲಿ ಗಾಯನ ಆರಂಭಿಸಿದ ಜಾನಕಿ ಅವರು ತಮ್ಮ ಚಿಕ್ಕಪ್ಪನ ಸಲಹೆಯಂತೆ ಚೆನ್ನೈಗೆ ಬಂದು ಎವಿಎಮ್ ಸ್ಟುಡಿಯೋದಲ್ಲಿ ಗಾಯಕಿಯಾಗಿ ಸೇರಿದರು. 1957ರಲ್ಲಿ ಚಿತ್ರಗಳಲ್ಲಿ ಹಾಡಲು ಆರಂಭಿಸಿದ ಜಾನಕಿ ಅದೇ ವರ್ಷದಲ್ಲಿ ಆರು ಭಾಷೆಗಳಲ್ಲಿ ಹಾಡಿದರು. ಸಂಗೀತ ನಿರ್ದೇಶಕ ಇಳಯರಾಜ ಮತ್ತು ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಜೊತೆ ಅತಿ ಹೆಚ್ಚು ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಅವರು ಸುಮಾರು 48 ಸಾವಿರ ಗೀತೆಗಳನ್ನು ಹಾಡಿದ್ದಾರೆ. ಭಾರತದ ಪ್ರಮುಖ ಭಾಷೆಗಳು ಸೇರಿದಂತೆ ಸಿಂಹಳ, ಜಪಾನಿ, ಲ್ಯಾಟಿನ್, ಅರೇಬಿಕ್ ಒಳಗೊಂಡಂತೆ ಹದಿನೇಳು ಭಾಷೆಗಳಲ್ಲಿ ಹಾಡಿದ ಹೆಗ್ಗಳಿಕೆ ಅವರದ್ದು.

ಹಿಂದೂಸ್ತಾನ್ ಸಮಾಚಾರ್


 rajesh pande