ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಎರಡರಷ್ಟು ಭದ್ರತಾ ವ್ಯವಸ್ಥೆ
ಬೆಂಗಳೂರು, 24 ಏಪ್ರಿಲ್ (ಹಿ.ಸ):ಆ್ಯಂಕರ್:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಏಪ್ರಿಲ್ 26ರಂದು ಮ
Constituency To Be Monitored As Sensitive 


ಬೆಂಗಳೂರು, 24 ಏಪ್ರಿಲ್ (ಹಿ.ಸ):ಆ್ಯಂಕರ್:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇದೇ ಏಪ್ರಿಲ್ 26ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಅತಿ ಸೂಕ್ಷ್ಮ ಲೋಕಸಭಾ ಕ್ಷೇತ್ರವೆಂದು ಪರಿಗಣಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಎರಡರಷ್ಟು ಭದ್ರತಾ ವ್ಯವಸ್ಥೆ (ಡಬಲ್ ಸೆಕ್ಯೂರಿಟಿ ಸಿಸ್ಟಮ್ ) ಅನ್ನು ಅಳವಡಿಕೆ ಮಾಡಲಾಗಿದೆ. ಇಲ್ಲಿಗೆ ಒಟ್ಟು 7 ಪ್ಯಾರಾ ಮಿಲಿಟರಿ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೆ, 28 ಲೋಕಸಭಾ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ, ಮತದಾನ ಪ್ರಕ್ರಿಯೆಯ ನಿಯಮಗಳನ್ನು ಸಹ ಚುನಾವಣಾ ಆಯೋಗವು ಪ್ರಕಟಿಸಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವೆಬ್ ಕಾಸ್ಟಿಂಗ್

ಈ ಬಗ್ಗೆ ಇಂದು (ಏಪ್ರಿಲ್ 24) ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಲ್ಲ ಮತಗಟ್ಟೆಯಲ್ಲಿ ಶೇಕಡಾ 100 ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಕ್ರಮಗಳು ನಡೆಯಬಹುದು. ಈ ಕ್ಷೇತ್ರದಲ್ಲಿ ಪ್ರಭಾವಿ ಎದುರಾಳಿಗಳು ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಹೆಚ್ಚಿನ ಭದ್ರತೆ ಹಾಗೂ ಅರೆ ಸೇನಾ ಪಡೆಯನ್ನು ನಿಯೋಜನೆ ಮಾಡುವಂತೆ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ರಾಜ್ಯ ಚುನಾವಣಾ ಆಯೋಗವು ಈ ಮನವಿಯನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನೆ ಮಾಡಿತ್ತು. ಅಲ್ಲಿಂದ ಜಿಲ್ಲಾಧಿಕಾರಿಗೆ ಸೂಚನೆಯನ್ನು ನೀಡಲಾಗಿತ್ತು. ಅದರನ್ವಯ ಈಗ ಕ್ರಮ ವಹಿಸಲಾಗಿದೆ. ಚುನಾವಣಾಧಿಕಾರಿಗಳ ಕೋರಿಕೆಯಂತೆ ಹೆಚ್ಚು ಭದ್ರತೆ ಮಾಡಲಾಗಿದೆ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್


 rajesh pande