ನೇಹಾ- ರಾಕೇಶ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ- ಪರಣ್ಣ
ಗಂಗಾವತಿ, 24 ಏಪ್ರಿಲ್ (ಹಿ.ಸ): ಆ್ಯಂಕರ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಮಾ
ನೇಹಾ- ರಾಕೇಶ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ- ಪರಣ್ಣ


ಗಂಗಾವತಿ, 24 ಏಪ್ರಿಲ್ (ಹಿ.ಸ):

ಆ್ಯಂಕರ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಮಾಜಿ ಶಾಸಕ ಪರಣ್ಣ ಮುನವಳ್ಳಿ ಆರೋಪಿಸಿದರು.

ನಗರದಲ್ಲಿ ಸಾರ್ವಜನಿಕ ಹಿತರಕ್ಷಣಾ ವೇದಿಕೆ ಹಾಗೂ ಬಿಜೆಪಿ ವತಿಯಿಂದ ಹುಬ್ಬಳ್ಳಿಯ ನೇಹಾ ಹಿರೇಮಠ ಹಾಗೂ ಯಾದಗಿರಿಯ ಸಹೋದರ ರಾಕೇಶ್ ಮಾದಿಗ ಅವರ ಕ್ರೂರ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರನ್ನು ಸೇರಿ ಹಿಂದೂಗಳ ಹತ್ಯೆ ಹೆಚ್ಚಾಗಿವೆ. ರಕ್ಷಣೆ ಇಲ್ಲದಂತಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಹತ್ಯೆಗೀಡಾದ ನೇಹಾ ಹಾಗೂ ರಾಕೇಶ್ ಅವರಿಗೆ ನ್ಯಾಯ ದೊರೆಯಬೇಕು. ಆದ್ದರಿಂದ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು. ಎಂದು ಸರ್ಕಾರವನ್ನು ಒತ್ತಾಯಿಸಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಮಾತನಾಡಿ, ಕಾಂಗ್ರೆಸ್ ತುಷ್ಠಿಕರಣ ರಾಜಕಾರಣ ಮಾಡುತ್ತಿದೆ. ಆದ್ದರಿಂದಲೇ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಸರ್ಕಾರಕ್ಕೆ ಬಿಗಿ ಹಿಡಿತ ಇಲ್ಲದಂತಾಗಿದೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪಟ್ಟಭದ್ರ ಹಿತಾಸಕ್ತಿಗಳನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾದಿಗ ಸಮಾಜದ ಮುಖಂಡರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.


 rajesh pande