ರೈಲ್ವೆ ನಿಲ್ದಾಣದ ಬಳಿಯ ಹೋಟೆಲ್ ನಲ್ಲಿ ಅಗ್ನಿ ಅವಘಡ: 6 ಮಂದಿ ಸಾವು
ಪಾಟ್ನಾ, 25 ಏಪ್ರಿಲ್ (ಹಿ.ಸ):ಆ್ಯಂಕರ್: ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್ ನಲ್ಲಿ ಗುರುವಾರ ಅ
tel Fire: 6 Killed In Fire At Hotel 


ಪಾಟ್ನಾ, 25 ಏಪ್ರಿಲ್ (ಹಿ.ಸ):ಆ್ಯಂಕರ್:

ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪವಿರುವ ಹೋಟೆಲ್ ನಲ್ಲಿ ಗುರುವಾರ ಅಗ್ನಿ ಅವಘಡ ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಪಾಟ್ನಾ ಜಂಕ್ಷನ್ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಹೋಟೆಲ್ನಲ್ಲಿ ಅಗ್ನಿ ಅಪಘಾತ ನಡೆದಿದೆ. ರಕ್ಷಣಾ ಕಾರ್ಯಚರಣೆ ಮುಂದುವರೆದಿದ್ದು, 20ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿದ ಗೃಹ ರಕ್ಷಕ ದಳ ಮತ್ತು ಅಗ್ನಿಶಾಮಕ ದಳದ ಡಿಜಿ ಶೋಭಾ ಒಹತ್ಕರ್ ಸುದ್ದಿಗಾರರೊಂದಿಗೆ ಮಾತನಾಡಿ,ನಾವು ಬೆಂಕಿಯನ್ನು ಹತೋಟಿಗೆ ತಂದಿದ್ದೇವೆ, ಅದರ ಬಗ್ಗೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮಾಹಿತಿ ಬಂದಿತು. ಸರಿಯಾದ ತನಿಖೆಯ ಮೂಲಕ ನಿಖರವಾದ ಕಾರಣವನ್ನು ಕಂಡುಹಿಡಿಯಲಾಗುವುದು ಮತ್ತು ಸೂಕ್ತ ಕ್ರಮವನ್ನು ಅನುಸರಿಸಲಾಗುವುದು ಎಂದು ಹೇಳಿದ್ದಾರೆ.

ಕಟ್ಟಡದ ಮುಂಭಾಗದಲ್ಲಿರುವ ಸೇತುವೆ ಮೇಲೆ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸ್ಟೇಷನ್ ರಸ್ತೆಯೂ ಸಂಪೂರ್ಣ ಬಂದ್ ಆಗಿದೆ. ಇಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು ಒಂದೂವರೆ ಗಂಟೆಗಳ ನಂತರ ವ್ಯಕ್ತಿಯ ಶವ ಹೊರತೆಗೆಯಲಾಯಿತು. ಅರ್ಧ ಗಂಟೆ ಬಳಿಕ ಇಬ್ಬರು ಬಾಲಕಿಯರ ಮೃತದೇಹಗಳನ್ನು ಹೊರ ತೆಗೆಯಲಾಯಿತು.

ಪಾಲ್ ಹೋಟೆಲ್ ನಲ್ಲಿ ಬೆಂಕಿ ಅವಘಡದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪಾಟ್ನಾ ಸೆಂಟ್ರಲ್ ರೇಂಜ್ ಟಿಎಸ್ಪಿ ಸತ್ಯ ಪ್ರಕಾಶ್ ಖಚಿತಪಡಿಸಿದ್ದಾರೆ. ಅದರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಇದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸುಮಾರು 20 ಮಂದಿ ಚಿಕಿತ್ಸೆಗಾಗಿ ಪಿಎಂಸಿಎಚ್ ಗೆ ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಹಿಂದೂಸ್ತಾನ್ ಸಮಾಚಾರ್


 rajesh pande