ಮತಗಟ್ಟೆಗಳಿಗೆ ತೆರಳಿದ ಸಿಬ್ಬಂದಿ
ಕೋಲಾರ, ೨೫ ಏಪ್ರಿಲ್ (ಹಿ.ಸ) : ಆ್ಯಂಕರ್ : ಮತದಾನ ಮಾಡಲು ಆಗಮಿಸುವ ಮತದಾರರು ಮತಗಟ್ಟೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮ
ಮತಗಟ್ಟೆಗಳಿಗೆ ತೆರಳಿದ ಸಿಬ್ಬಂದಿ


ಕೋಲಾರ, ೨೫ ಏಪ್ರಿಲ್ (ಹಿ.ಸ) :

ಆ್ಯಂಕರ್ : ಮತದಾನ ಮಾಡಲು ಆಗಮಿಸುವ ಮತದಾರರು ಮತಗಟ್ಟೆಗಳಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದೆ. ಮತಗಟ್ಟೆಯಲ್ಲಿ ಮತದಾನದ ಪ್ರಕ್ರಿಯೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಮತದಾರರು ಹೊರತುಪಡಿಸಿ ಬೇರೆ ವ್ಯಕ್ತಿಗಳು ಮತಗಟ್ಟೆ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಆಯೋಗದಿಂದ ಅಧಿಕೃತ ಪಾಸ್ ಹೊಂದಿರುವ ಮಾಧ್ಯಮ ಪ್ರತಿನಿಧಿಗಳು ಮತಗಟ್ಟೆಯ ಹೊರಗಿನಿಂದ ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ.

ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತಗಟ್ಟೆಗಳಿಗೆ ಕೋಲಾರ ಜ್ಯೂನಿಯರ್ ಕಾಲೇಜಿನ ಮಸ್ಟರಿಂಗ್ ಕೇಂದ್ರದಿAದ ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದರು. ಮತಗಟ್ಟೆ ಅಧಿಕಾರಿಗಳಿಗೆ ಇ.ವಿ.ಎಂ. ಯಂತ್ರ ವಿ.ವಿ ಪ್ಯಾಟ್ ಹಾಗೂ ಇತರ ಚುನಾವಣಾ ಸಾಮಗ್ರಿಗಳನ್ನು ವಿತರಿಸಲಾಯಿತು. ಪೊಲೀಸ್ ಭದ್ರತೆಯೊಂದಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳಲ್ಲಿ ಸಿಬ್ಬಂದಿ ಮತಗಟ್ಟೆಯೊಂದಿಗೆ ತೆರಳಿದರು.

ಚಿತ್ರ : ಕೋಲಾರ ಜ್ಯೂನಿಯರ್ ಕಾಲೇಜಿನ ಮಸ್ಟರಿಂಗ್ ಸೆಂಟರ್ನಿ0ದ ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದರು.


 rajesh pande