ಮಹಿಳಾ ಮತದಾರರನ್ನು ಸೆಳೆಯಲು ೪೦ ಸಖಿ ಮತಗಟ್ಟೆ
ಕೋಲಾರ, ೨೫ ಏಪ್ರಿಲ್ (ಹಿ.ಸ) : ಆ್ಯಂಕರ್ : ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಐದರಂತೆ ಒ
ಮಹಿಳಾ ಮತದಾರರನ್ನು ಸೆಳೆಯಲು ಕೋಲಾರ ಜಿಲ್ಲೆಯ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಾಪಿಸಿರುವ ಸಖಿ ಮತಗಟ್ಟೆ.


ಕೋಲಾರ, ೨೫ ಏಪ್ರಿಲ್ (ಹಿ.ಸ) :

ಆ್ಯಂಕರ್ : ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಐದರಂತೆ ಒಟ್ಟು ೪೦ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮಹಿಳಾ ಮತದಾರರನ್ನು ಸೆಳೆಯಲು ಎಲ್ಲಾ ಮಹಿಳೆಯರೇ ಕಾರ್ಯನಿರ್ವಹಿಸಲಿದ್ದಾರೆ. ಮಹಿಳಾ ಮತದಾರರು ಚುನಾವಣಾ ಹಬ್ಬದಲ್ಲಿ ಪಾಲ್ಗೊಳ್ಳಲು ಪ್ರೇರೆಪಿಸಲು ಸಖಿ ಮತಗಟ್ಟೆಗಳನ್ನು ಆಕರ್ಷಕವಾಗಿ ತೆರೆಯಲಾಗಿದೆ.

ವಿಕಲಚೇತನರು ತಮ್ಮ ಹಕ್ಕು ಚಲಾಯಿಸಲು ಅವರನ್ನು ಉತ್ತೇಜಿಸಲು ಒಟ್ಟು ವಿಶೇಷಚೇತನರು ನಿರ್ವಹಿಸುವ ಒಟ್ಟು ೮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಯುವ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಲು ಪ್ರೊತ್ಸಾಹ ನೀಡಲು ಯುವಕರೇ ನಿರ್ವಹಿಸುವ ೮ ಯುವ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕೋಲಾರ ಜಿಲ್ಲೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಸಾಂಸ್ಕೃತಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ದೃಷ್ಠಿಹೀನರು ಮತ ಚಲಾಯಿಸಲು ಬ್ರೆöÊಲ್ ಲಿಪಿ ಒದಗಿಸಲಾಗಿದೆ ಎಂದು ಕೋಲಾರ ಲೋಕಸಭಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ. ೮೫ ವರ್ಷ ಮೀರಿದ ೧,೪೩೩ ಮಂದಿ ಹಿರಿಯ ನಾಗರೀಕರು ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿದ್ದರು. ಅತ್ಯಂತ ಉತ್ಸಾಹದಿಂದ ಹಿರಿಯ ನಾಗರೀಕರು ಮನೆಗಳಲ್ಲಿ ೧,೩೬೧ ಮಂದಿ ಮತ ಚಲಾಯಿಸಿದರು. ಒಟ್ಟು ೭೫೯ ಮಂದಿ ವಿಶೇಷಚೇತನರು ಮನೆಯಿಂದಲೇ ಮತಚಲಾಯಿಸಲು ನೋಂದಣಿ ಮಾಡಿಕೊಂಡಿದ್ದರು, ಆ ಪೈಕಿ ೭೫೩ ಮಂದಿ ಮತಚಲಾಯಿಸಿದರು.

ಒಟ್ಟು ಎ.ವಿ.ಎಸ್ ೯೨೦ ಮಂದಿ ಮತದಾರರನ್ನು ಗುರುತಿಸಲಾಗಿದ್ದು, ೭೫೩ ಮಂದಿ ಮತಚಲಾಯಿಸಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದ್ದ, ೨,೦೬೨ ಮಂದಿಯ ಪೈಕಿ ೨,೧೧೨ ಮಂದಿ ಅಂಚೆ ಮತಪತ್ರ ಮೂಲಕ ಮತಚಲಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮತದಾನ ಮುಗಿದ ನಂತರ ಬಿಗಿ ಭದ್ರತೆಯೊಂದಿಗೆ ಕಂಟೈನರ್ಗಳಿಗೆ ಇ.ವಿ.ಎಂ ಯಂತ್ರಗಳನ್ನು ಕೋಲಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿರುವ ಎಣಿಕೆ ಕೇಂದ್ರಕ್ಕೆ ತರಲಾಗುವುದು. ೧೭ ಸ್ಟ್ರಾಂಗ್ ರೂಂಗಳನ್ನು ಸ್ಥಾಪಿಸಲಾಗಿದೆ. ಮೂರು ಹಂತದ ಭದ್ರತೆಯನ್ನು ಎಣಿಕೆ ಕೇಂದ್ರಕ್ಕೆ ಒದಗಿಸಲಾಗಿದೆ. ಭದ್ರತಾ ವ್ಯವಸ್ಥೆಯನ್ನು ಅಭ್ಯರ್ಥಿಗಳು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ.

ಕೋಲಾರ ಲೋಕಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಬುಧವಾರ ಸಂಜೆ ಯಿಂದ ಜಾರಿಗೆ ಬರುವಂತೆ ಶುಕ್ರವಾರ ಮತದಾನ ಮುಗಿಯುವ ತನಕ ೪೮ ಗಂಟೆಗಳ ಕಾಲ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಗುರುವಾರ ಮತ್ತು ಶುಕ್ರವಾರ ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ನಿಷೇದಾಜ್ಞೆ ಜಾರಿಯಲ್ಲಿರುವ ಸಮಯದಲ್ಲಿ ಧ್ವನಿ ವರ್ಧಕಗಳನ್ನು ನಿಷೇಧಿಸಲಾಗಿದೆ. ಮತದಾರರ ಮೇಲೆ ಪ್ರಭಾವ ಬೀರುವ ಮತಗಟ್ಟೆ ಸಮೀಕ್ಷೆಗಳು ಮತ್ತು ಮತದಾರರ ಅಭಿಪ್ರಾಯದ ಸಮೀಕ್ಷೆಯನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದರು.

ಮತದಾನ ನಡೆಯುವ ಶುಕ್ರವಾರದಂದು ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲಾ ಖಾಸಗಿ ವಲಯದ ಕಾರ್ಮಿಕರು ಮತದಾನದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ರಜೆ ಘೋಷಿಸಲು ಖಾಸಗಿ ಉದ್ಯಮಿಗಳಿಗೆ ಕಾರ್ಮಿಕ ಇಲಾಖೆಯಿಂದ ಸೂಚನೆ ನೀಡಲಾಗಿದೆ. ಮತದಾನದ ದಿನದಂದು ರಜೆಯಿರುವ ಕಾರಣ ಮತದಾರರು ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತಚಲಾಯಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಮನವಿ ಮಾಡಿದ್ದಾರೆ.

ಚಿತ್ರ : ಮಹಿಳಾ ಮತದಾರರನ್ನು ಸೆಳೆಯಲು ಕೋಲಾರ ಜಿಲ್ಲೆಯ ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಾಪಿಸಿರುವ ಸಖಿ ಮತಗಟ್ಟೆ.


 rajesh pande