ಆಮಿಷ ಬದಿಗೊತ್ತಿ ಮತದಾನ : ನ್ಯಾ. ಸುನಿಲ್ ಹೊಸಮನಿ ಕರೆ
ಕೋಲಾರ, ೨೫ ಏಪ್ರಿಲ್ (ಹಿ.ಸ) : ಆ್ಯಂಕರ್ : ಹಣ, ಊಟ, ವಸ್ತುಗಳು ಸೇರಿದಂತೆ ಮತ್ತಿತರ ಆಮಿಷಗಳಿಗೆ ಒಳಗಾಗಿ ಚುನಾವಣೆಯಲ್
ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಲೀಡ್ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನದಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಹೊಸಮನಿ ಮಾತನಾಡಿದರು.


ಕೋಲಾರ, ೨೫ ಏಪ್ರಿಲ್ (ಹಿ.ಸ) :

ಆ್ಯಂಕರ್ : ಹಣ, ಊಟ, ವಸ್ತುಗಳು ಸೇರಿದಂತೆ ಮತ್ತಿತರ ಆಮಿಷಗಳಿಗೆ ಒಳಗಾಗಿ ಚುನಾವಣೆಯಲ್ಲಿ ಅರ್ಹತೆ ಇಲ್ಲದಿರುವ ಅಭ್ಯರ್ಥಿಗಳಿಗೆ ಮತ ಚಲಾಯಿಸುವುದು ಅತ್ಯಂತ ಹೀನಾಯ ಕೆಲಸ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಸುನೀಲ್ ಹೊಸಮನಿ ಹೇಳಿದರು.

ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಆರ್ಸೆಟಿ , ಲೀಡ್ ಬ್ಯಾಂಕ್ ಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

ಮತ ಚಲಾಯಿಸುವ ಅರ್ಹತೆ ಹೊಂದಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕು. ಸಂವಿಧಾನದಿ0ದ ನಮಗೆ ಸಿಕ್ಕಿರುವ ಮತದಾನ ಹಕ್ಕು ಅತ್ಯಂತ ಶ್ರೇಷ್ಠ ಮತ್ತು ಬಲಿಷ್ಠವಾದದ್ದು. ಆದ್ದರಿಂದ ಪ್ರತಿಯೊಂದು ಚುನಾವಣೆಯಲ್ಲೂ ತಪ್ಪದೇ ಮತ ಚಲಾಯಿಸುವ ಮೂಲಕ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಮತದಾನದ ದಿನದಂದು ಸಾರ್ವತ್ರಿಕ ರಜೆ ಇರುತ್ತದೆಂದು, ಮತ ಚಲಾಯಿಸದೆ ಪ್ರವಾಸಿ ಸ್ಥಳಗಳಿಗೆ ತೆರಳುವುದು ಸರಿಯಾದ ಕ್ರಮವಲ್ಲ ಎಂದರು.

ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿಚಂದ್ರ ಮಾತನಾಡಿ, ದೇಶದ ಭವಿಷ್ಯದ ದೃಷ್ಟಿಯಿಂದ ಮತದಾನ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಮುಂದಿನ ಪೀಳಿಗೆಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಆಸೆಗಳಿಗೆ ಬಲಿಯಾಗದೆ ಮತದಾನ ಮಾಡುವ ಮೂಲಕ ಉತ್ತಮ ನಾಗರಿಕರಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಗೋವಿಂದೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಶೇ.೧೦೦ ಮತದಾನ ಆಗುವ ಮೂಲಕ ದೇಶದಲ್ಲೇ ಜಿಲ್ಲೆಗೆ ಕೀರ್ತಿ ತರುವ ಕೆಲಸ ಪ್ರತಿಯೊಬ್ಬರು ಮಾಡಬೇಕು ಎಂದರು.

ಕೇAದ್ರ ಚುನಾವಣಾ ಆಯೋಗ ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಿ.ವಿಜಿಲ್ ಆಪ್ ನ್ನು ಜಾರಿಗೆ ತಂದಿದ್ದು, ಆಪ್ ಸಹಾಯದಿಂದ ಸಾರ್ವಜನಿಕರು ಚುನಾವಣಾ ಅಕ್ರಮಗಳ ಬಗ್ಗೆ ಸಾಕ್ಷö್ಯಧಾರಗಳ ಮೂಲಕ ದೂರು ಸಲ್ಲಿಸಬಹುದು ಎಂದು ಹೇಳಿದರು.

ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುಧೀರ್.ಎಸ್ ಮಾತನಾಡಿ, ಲೋಕಸಭಾ ಚುನಾವಣೆ ದೇಶ ಬಹುದೊಡ್ಡ ಚುನಾವಣೆಯಾಗಿರುವುದರಿಂದ ಮತದಾರರು ಜಾತಿ, ಧರ್ಮ ನೋಡದೆ ಪ್ರಾಮಾಣಿಕ ಹಾಗೂ ನಿಷ್ಕಳಂಕ ಅಭ್ಯಥಿಗಳಿಗೆ ಮತ ಚಲಾಯಿಸುವ ಮೂಲಕ ದೇಶದ ಅಭಿವೃದ್ದಿಯಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಶ್ರೀನಿವಾಸ್, ತರಬೇತಿ ಸಂಸ್ಥೆಯ ನಿರ್ದೇಶಕ ಯಲ್ಲೇಶ್ ಸಿ, ಜಿ.ಪಂ ಅಧಿಕಾರಿ ಜಗದೀಶ್, ಆರ್ಥಿಕ ಸಾಕ್ಷರತಾ ಕೇಂದ್ರದ ಸಲಹೆಗಾರ್ತಿ ವಿಶಾಲಾಕ್ಷಿ, ತರಬೇತಿ ಸಂಸ್ಥೆಯ ತರಬೇತುದಾರರಾದ ಕೆ.ವಿ ವಿಜಯ್ ಕುಮಾರ್, ದೇವಲಪಲ್ಲಿ ಎನ್.ಗಿರೀಶ್ ರೆಡ್ಡಿ, ಎನ್.ವಿ ನಾರಾಯಣಸ್ವಾಮಿ, ಅರ್ಪಿತ, ವೆಂಕಟಚಲಪತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಚಿತ್ರ : ಕೋಲಾರ ತಾಲ್ಲೂಕಿನ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ಲೀಡ್ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಮತದಾರರ ಜಾಗೃತಿ ಅಭಿಯಾನದಲ್ಲಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಹೊಸಮನಿ ಮಾತನಾಡಿದರು.


 rajesh pande