ಕುರುಗೋಡು : ಪಂಜಿನ ಮೆರವಣಿಗೆ ಮೂಲಕ ಮತದಾನ ಜಾಗೃತಿ
ಕುರುಗೋಡು, 25 ಏಪ್ರಿಲ್ (ಹಿ.ಸ): ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕುರುಗೋಡು ತಾಲ್ಲೂಕು ಆಡಳಿ
Voting awareness through flag march


Voting awareness through flag march


Voting awareness through flag march


Voting awareness through flag march


ಕುರುಗೋಡು, 25 ಏಪ್ರಿಲ್ (ಹಿ.ಸ):

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಮತ್ತು ಕುರುಗೋಡು ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಪುರಸಭೆ ಇವರ ಸಂಯುಕ್ತಾಶ್ರಯದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಕುರುಗೋಡು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬುಧವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿ ಜನರಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.

ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ನಿರ್ಮಲಾ ಅವರು ಜಾಥಾಗೆ ಚಾಲನೆ ನೀಡಿ ಮಾತನಾಡಿ, ಮೇ 07 ರಂದು ನಡೆಯವ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮತದಾನ ಮಾಡಿ ಜಿಲ್ಲೆಗೆ ಮಾದರಿಯಾಗಬೇಕು ಎಂಬ ಉದ್ದೇಶದಿಂದ ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರಜ್ಞಾವಂತ ಮತದಾರರು ತಪ್ಪದೆ ಮತದಾನ ಮಾಡಿ ಎಂದು ಸಲಹೆ ನೀಡಿದರು.

ಹಣಕ್ಕೆ ಮತ ಮಾರಿಕೊಳ್ಳಬೇಡಿ, ಅಭಿವೃದ್ಧಿ ಬಗ್ಗೆ ಕಾಳಜಿ ಇರುವ ಅರ್ಹರಿಗೆ ಮತ ನೀಡಿ, ಮತದಾನ ನಮ್ಮ ಹಕ್ಕು ಎನ್ನುವ ಘೋಷಣೆಗಳನ್ನು ಕೂಗಿದರು.

*ಮೆಹಂದಿಯಲ್ಲಿ ಅರಳಿದ ಮತದಾನ ಜಾಗೃತಿ:*

ಕುರುಗೋಡು ತಾಲ್ಲೂಕಿನ ದಮ್ಮೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಸದ್ಗುರು ಶ್ರೀ ವೆಂಕಾವಧೂತರ ದೇವಸ್ಥಾನದ ಆವರಣದಲ್ಲಿ ಮತದಾನ ಜಾಗೃತಿ ಅಂಗವಾಗಿ ವಿನೂತನವಾಗಿ ಮೆಹಂದಿ ಕಾರ್ಯಕ್ರಮ ನಡೆಯಿತು.

ಸ್ವ-ಸಹಾಯ ಸಂಘದ ಮಹಿಳೆಯರಿಗೆ ಮೆಹಂದಿ ಬರೆಯುವ ಮೂಲಕ ಮೇ 07 ರಂದು ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕ ಶಿವರಾಮ ರೆಡ್ಡಿ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಅನೀಲ್ ಕುಮಾರ್, ತಾಲ್ಲೂಕು ಯೋಜನಾಧಿಕಾರಿ ರಾಧಿಕಾ, ಪುರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು, ತಾಲ್ಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು, ಸ್ವ-ಸಹಾಯ ಸಂಘದ ಮಹಿಳೆಯರು ಮತ್ತು ಆಶಾ-ಕಾರ್ಯಕರ್ತೆಯರು ಭಾಗವಹಿಸಿದ್ದರು.


 rajesh pande