ಕರ್ನಾಟಕದಲ್ಲಿ ಒಬಿಸಿ ಮೀಸಲಾತಿ ಮುಸ್ಲಿಮರ ಪಾಲು – ಕಾಂಗ್ರೆಸ್ ವಿರುದ್ಧ ಮತ್ತೆ ಮೋದಿ ಕಿಡಿ
ಭೋಪಾಲ್, 25 ಏಪ್ರಿಲ್ (ಹಿ.ಸ):ಆ್ಯಂಕರ್:ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇತರೇ ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲ
congress-gave-obcs-reservation-share-to-muslim


ಭೋಪಾಲ್, 25 ಏಪ್ರಿಲ್ (ಹಿ.ಸ):ಆ್ಯಂಕರ್:ಕರ್ನಾಟಕದ ಕಾಂಗ್ರೆಸ್ ಸರ್ಕಾರ ಇತರೇ ಹಿಂದುಳಿದ ವರ್ಗದ ಅಡಿಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿದ ವಿಚಾರವನ್ನು ಮತ್ತೆ ಪ್ರಸ್ತಾಪ ಮಾಡಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಮಧ್ಯಪ್ರದೇಶದ ಮೊರೇನಾದಲ್ಲಿ ನಡೆದ ಚುನಾವಣಾ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ರಾತ್ರೋರಾತ್ರಿ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದ ಎಲ್ಲ ವರ್ಗವನ್ನು ಒಬಿಸಿಗೆ ಸೇರಿಸಿ ಆದೇಶ ಹೊರಡಿಸಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮಾನ್ಯತೆ ನೀಡಿವ ಮೂಲಕ ಒಬಿಸಿ ಜನರ ಅವಕಾಶಗಳನ್ನು ಕಳ್ಳತನದಿಂದ ಕಿತ್ತುಕೊಂಡಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಒಬಿಸಿ ಕೋಟಾಕ್ಕೆ ಎಲ್ಲಾ ಮುಸ್ಲಿಮರನ್ನು ಸೇರಿಸುವ ಮೂಲಕ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕಿದ್ದ ದೊಡ್ಡ ಪಾಲನ್ನು ಕಿತ್ತುಕೊಳ್ಳಲಾಗಿದೆ. ಈ ವಿಧಾನವನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಯೋಜಿಸುತ್ತಿದ್ದು, ಇದು ಒಬಿಸಿ ಸಮುದಾಯದವರಿಗೆ ಅತ್ಯಂತ ಅಪಾಯಕಾರಿ.

ಸಂವಿಧಾನ ಮತ್ತು ಕಾನೂನು ವಿರುದ್ಧವಾಗಿ ಒಬಿಸಿ ಮೀಸಲಾತಿಯನ್ನು ನೀಡಲಾಗಿದೆ. ಒಬಿಸಿ ಸಮುದಾಯಕ್ಕೆ ಸಿಗುವ ಲಾಭವನ್ನು ಲೂಟಿ ಮಾಡಿ ಅವರಿಗೆ ನೀಡಲಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಂವಿಧಾನ ರಚಿಸುವ ವೇಳೆ ತಿಂಗಳುಗಳ ಕಾಲ ಚರ್ಚೆ ನಡೆಸಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದು ನಿರ್ಧಾರಕ್ಕೆ ಬರಲಾಗಿತ್ತು. ಆದರೆ ಕಾಂಗ್ರೆಸ್ ಮೋಸ ಮಾಡಿ ಹಿಂಬಾಗಿಲಿನಿಂದ ಧರ್ಮ ಆಧಾರಿತ ಮೀಸಲಾತಿ ನೀಡಿದೆ. ವೋಟು ಬ್ಯಾಂಕ್, ತುಷ್ಟೀಕರಣ ಮುಳುಗಿರುವ ಕಾಂಗ್ರೆಸ್ ಕರ್ನಾಟಕದ ಇದೇ ಮಾದರಿಯನ್ನು ಇಡೀ ದೇಶದಲ್ಲಿ ಅನುಷ್ಠಾನಕ್ಕೆ ತರಲು ಮುಂದಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾರು ಅಪಫಾತ – ಶಾಸಕ ಎ.ಆರ್ ಕೃಷ್ಣಮೂರ್ತಿ ಅಪಾಯದಿಂದ ಪಾರು

ಕಾಂಗ್ರೆಸ್ ಹಿಂದುಳಿದ, ದಲಿತರ, ಆದಿವಾಸಿಗಳ ಹಕ್ಕುಗಳನ್ನು ಕಿತ್ತುಕೊಳ್ಳುವ ಷಡ್ಯಂತ್ರವನ್ನು ಬಹಳ ಹಿಂದಿನಿಂದಲೂ ಮಾಡುತ್ತಾ ಬಂದಿದೆ. ಹಿಂಬಾಗಿಲಿನಿಂದ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಪ್ರಯತ್ನ ಮಾಡುತ್ತಿದೆ. 2014 ರಿಂದ ಒಬಿಸಿ ಸಮುದಾಯ ಎಚ್ಚೆತ್ತುಕೊಂಡ ಬಳಿಕ ಕಾಂಗ್ರೆಸ್ ಅನ್ನು ಅಧಿಕಾರದಿಂದ ದೂರ ಇಟ್ಟಿದೆ. ಆದರೆ ಕಾಂಗ್ರೆಸ್ ಇನ್ನು ಸುಧಾರಿಸಿಲ್ಲ. ಕನಸು ಈಡೇಸಿಕೊಳ್ಳಲು ಈಗಲೂ ಪ್ರಯತ್ನ ಮುಂದುವರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್


 rajesh pande