ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನಲ್ಲಿ ಮೊದಲು ಹಕ್ಕು, ಮೋದಿ ಹೇಳಿದ್ದು ಸತ್ಯ, ಸಾಕ್ಷ್ಯ ಕೊಟ್ಟ ಬಿಜೆಪಿ
ನವದೆಹಲಿ, 26 ಏಪ್ರಿಲ್ (ಹಿ.ಸ):ಆ್ಯಂಕರ್:ಇಂದು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಎರಡನೇ ಹಂತದ ಮತದಾನ ನಡೆಯುತ್
ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನಲ್ಲಿ ಮೊದಲು ಹಕ್ಕು, ಮೋದಿ ಹೇಳಿದ್ದು ಸತ್ಯ, ಸಾಕ್ಷ್ಯ ಕೊಟ್ಟ ಬಿಜೆಪಿ


ನವದೆಹಲಿ, 26 ಏಪ್ರಿಲ್ (ಹಿ.ಸ):ಆ್ಯಂಕರ್:ಇಂದು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದೆ. ಇದರ ನಡುವೆ ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಬರೆದ ಪತ್ರದ ಬಗ್ಗೆ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಪ್ರಣಾಳಿಕೆಯ ಬಗ್ಗೆ ತಿಳುವಳಿಕೆ ನೀಡುವಂತೆ ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದರು. ಇದೀಗ ಇದಕ್ಕೆ ಮನಮೋಹನ್ ಸಿಂಗ್ ಅವರ ಹಳೆಯ ಹೇಳಿಕೆಯನ್ನು ಇಟ್ಟುಕೊಂಡು ಬಿಜೆಪಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅವರ ಅಧಿಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ ಆದ್ಯತೆ ಬಗ್ಗೆ ಬಿಜೆಪಿ ಒಂದು ವಿಡಿಯೋವೊಂದು ವೈರಲ್ ಮಾಡಿದೆ.

ಬಿಜೆಪಿಯ 2009ರಂದು ಮನಮೋಹನ್ ಸಿಂಗ್ ಅವರು ಪ್ರತಿಕಾಗೋಷ್ಠಿಯಲ್ಲಿ ನೀಡಿದ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದೆ. ಈ ಎಲ್ಲ ಚರ್ಚೆಗೆ ಕಾರಣವಾದದ್ದು ಕಾಂಗ್ರೆಸ್ ಪ್ರಣಾಳಿಕೆ, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಸಂಪತ್ತು ಮರುಹಂಚಿಕೆ ಭರವಸೆ. ಇದನ್ನು ಬಿಜೆಪಿ ಅಸ್ತ್ರವನ್ನಾಗಿ ಬಳಸಿಕೊಂಡು ಕಾಂಗ್ರೆಸ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿತ್ತು. ಇದಕ್ಕೆ ತಪ್ಪು ಸುರಿದದ್ದು, ಕಾಂಗ್ರೆಸ್ ಪಕ್ಷದ ತಾತ್ವಿಕ ಗುರು ಹಾಗೂ ಪಕ್ಷದ ವಿದೇಶೀ ವಿಭಾಗದ ಛೇರ್ಮನ್ ಸ್ಯಾಮ್ ಪಿತ್ರೋಡ ಅವರು ‘ಅಮೆರಿಕದಲ್ಲಿ ಇನ್ ಹೆರಿಟೆನ್ಸ್ ಟ್ಯಾಕ್ಸ್ ಜಾರಿಯಲ್ಲಿದೆ. ಒಬ್ಬ ವ್ಯಕ್ತಿ ಬಳಿ 100 ಮಿಲಿಯನ್ ಮೌಲ್ಯದ ಆಸ್ತಿ ಇದ್ದು ಆತ ಸತ್ತರೆ ಮಕ್ಕಳಿಗೆ ಶೇ. 40ರಷ್ಟು ಆಸ್ತಿಯನ್ನು ಮಾತ್ರ ವರ್ಗಾಯಿಸಬಹುದು. ಉಳಿದ ಶೇ. 55ರಷ್ಟು ಆಸ್ತಿ ಸರ್ಕಾರಕ್ಕೆ ಹೋಗುತ್ತದೆ. ಭಾರತದಲ್ಲಿ ಈ ಕಾನೂನು ಇಲ್ಲ. ಇದನ್ನು ಭಾರತದಲ್ಲಿ ತರಬೇಕು ಎಂಬ ರೀತಿಯಲ್ಲಿ ಅವರ ಹೇಳಿಕೆ ಇತ್ತು. ಇದೀಗ ಈ ವಿಚಾರ ಚರ್ಚೆಯಾಗುತ್ತಿದೆ.

ಕಾಂಗ್ರೆಸ್ ಪಕ್ಷ ಸ್ಯಾಮ್ ಪಿತ್ರೋಡ ಅವರು ನೀಡಿರುವ ಹೇಳಿಕೆಗೆ ಮೌನ ವಹಿಸಿದೆ. ಇದನ್ನು ಮೋದಿ ಕೂಡ ಅಸ್ತ್ರವಾಗಿ ಬಳಸಿಕೊಂಡು ತಮ್ಮ ಪ್ರಚಾರದ ವೇಳೆ ಈ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಇಂತಹ ಯಾವುದೇ ವಿಷಯವಿಲ್ಲ. ಮೋದಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದ್ದಾರೆ. ಇದೀಗ ಇದಕ್ಕೆ ಟಕ್ಕರ್ ನೀಡಲು 2009ರ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

ಈ ವಿಡಿಯೋದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು “ಅಲ್ಪಸಂಖ್ಯಾತರು, ವಿಶೇಷವಾಗಿ ಮುಸ್ಲಿಂ ಅಲ್ಪಸಂಖ್ಯಾತರು, ಅವರು ಬಡವರಾಗಿದ್ದರೆ, ರಾಷ್ಟ್ರದ ಸಂಪನ್ಮೂಲಗಳ ಮೇಲೆ ಪೂರ್ವ ಹಕ್ಕು ಹೊಂದಿರುತ್ತಾರೆ ಎಂದು ಹೇಳಿದ್ದಾರೆ. ಈ ವಿಡಿಯೋದ ಮೇಲೆ ಶೀರ್ಷಿಕೆಯನ್ನು ಬಿಜೆಪಿ ನೀಡಿದೆ. ಜನರು ಕಷ್ಟಪಟ್ಟು ದುಡಿದ ಹಣವನ್ನು ಕಿತ್ತುಕೊಂಡು “ಒಳನುಸುಳುಕೋರರು” ಮತ್ತು “ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ” ಮರುಹಂಚಿಕೆ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು ಎಂದು ಹೇಳಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande