ಮಲೇರಿಯಾ ವಿರುದ್ಧ ಹೋರಾಟ ತೀವ್ರ- ಡಾ. ಸುರೇಂದ್ರಬಾಬು
ರಾಯಚೂರು, 26 ಏಪ್ರಿಲ್ (ಹಿ.ಸ): ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
  ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ’ ಡಾ. ಸುರೇಂದ್ರಬಾಬು 


  ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ’ ಡಾ. ಸುರೇಂದ್ರಬಾಬು 


ರಾಯಚೂರು, 26 ಏಪ್ರಿಲ್ (ಹಿ.ಸ):

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಮಲೇರಿಯಾ ದಿನಾಚರಣೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಚರಿಸಲಾಯಿತು. “ವಿಶ್ವ ಮಲೇರಿಯಾ ದಿನಾಚರಣೆ ಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸುರೇಂದ್ರಬಾಬು ಅವರು ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳು ಡಾ.ಚಂದ್ರಶೇಖರಯ್ಯ ಹಸಿರು ನಿಶಾನೆ ತೋರಿಸುವುದರ ಮೂಲಕ 2024ನೇ ವರ್ಷದ ಧೈಯ ವಾಕ್ಯವಾದ ‘ಹೆಚ್ಚು ಸಮಾನತೆಯ ಜಗತ್ತಿಗೆ ಮಲೇರಿಯಾ ವಿರುದ್ಧದ ಹೋರಾಟವನ್ನು ತೀವ್ರಗೊಳಿಸೋಣ’ ಎಂದು ಹೇಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮಲೇರಿಯಾ ರೋಗದ ಲಕ್ಷಣಗಳು ಮತ್ತು ನಿಯಂತ್ರಣಾ ಕ್ರಮಗಳಾದ 'ಸೊಳ್ಳೆಗಳ ನಿಯಂತ್ರಣ ಒಂದೇ ಮಲೇರಿಯಾ ರೋಗದ ಹತೋಟಿಗೆ ಮುಖ್ಯ ವಿಧಾನ, ನೀರನ್ನು ಶೇಖರಿಸಿಡುವ ಸಿಮೆಂಟ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ. ಡ್ರಮ್ ಬ್ಯಾರಲ್, ಎರ್ಕೂಲರ, ಮಣ್ಣಿನ ಮಡಿಕೆಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ತಿಕ್ಕಿ ತೊಳೆದು ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳುವುದು ಮತ್ತು ಮುಚ್ಚಳದಿಂದ ಭದ್ರವಾಗಿ ಮುಚ್ಚಿಡುವುದು. ನೀರು ಸಂಗ್ರಹಣವಾಗದಂತೆ ಎಚ್ಚರ ವಹಿಸುವುದು, ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆಪರದೆ, ಸೊಳ್ಳೆ ನಿರೋಧಕಗಳನ್ನು ಬಳಸುವುದು, ಹಾಗೂ ಯಾವುದೇ ಜ್ವರವಿರಲಿ ಹತ್ತಿರದ ಸರ್ಕಾರಿ ಆರೊಗ್ಯ ಕೇಂದ್ರಕ್ಕೆ ಬೇಟಿ ನೀಡಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಿ ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳುವುದು ಅತ್ಯತ್ತಮ Pಡಿeveಟಿಣioಟಿ is beಣಣeಡಿ ಣheಟಿ ಅuಡಿe. ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳು, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು, ಜಿಲ್ಲಾ ಸರ್ವೆಕ್ಷಣಾಧಿಕಾರಿಗಳು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ತಾಲೂಕ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಎಮ್.ಟಿ.ಎಸ್. ಆರೋಗ್ಯ ನಿರಿಕ್ಷಣಾಧಿಕಾರಿಗಳು, ಆಶಾ ಕಾರ್ಯಕ್ರರ್ತೆಯರು ಹಾಗೂ ಸಿಬ್ಬಂದಿರವರು ಉಪಸ್ಥಿತರಿದ್ದರು.


 rajesh pande