ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಯಲಿ : ರಾಹುಲ್ ತುಕಾರಾಮ ಪಾಂಡ್ವೆ
ರಾಯಚೂರು, 26 ಏಪ್ರಿಲ್ (ಹಿ.ಸ): ಆ್ಯಂಕರ್ : ಜಿಲ್ಲೆಯಲ್ಲಿ ಏ.29ರಿಂದ ಮೇ.16 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗ
ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಯಲಿ : ರಾಹುಲ್ ತುಕಾರಾಮ ಪಾಂಡ್ವೆ


ರಾಯಚೂರು, 26 ಏಪ್ರಿಲ್ (ಹಿ.ಸ):

ಆ್ಯಂಕರ್ : ಜಿಲ್ಲೆಯಲ್ಲಿ ಏ.29ರಿಂದ ಮೇ.16 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 6620 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಏ.29ರಿಂದ ಮೇ.16ರವರೆಗೆ ಜಿಲ್ಲೆಯ ರಾಯಚೂರು ತಾಲೂಕಿನ 05, ಮಾನವಿಯ 02, ಸಿಂಧನೂರಿನ 02, ಲಿಂಗಸುಗೂರಿನ 02 ಹಾಗೂ ದೇವದುರ್ಗ ತಾಲೂಕಿನ 01 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಎಲ್ಲಾ ಅಧಿಕಾರಿಗಳು ಪರೀಕ್ಷೆಗಳನ್ನು ಪಾರದರ್ಶಕ ಮತ್ತು ವ್ಯವಸ್ಥಿತವಾಗಿ ನಡೆಸಲು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು. ಪರೀಕ್ಷಾ ಕೇಂದ್ರದ 200 ಮೀಟರ್ ಪ್ರದೇಶದಲ್ಲಿ ಕಲಂ 144 ನಿμÉೀದಾಜ್ಞಾಯನ್ನು ಜಾರಿಗೊಳಿಸಲಾಗಿದ್ದು, ಜಿಲ್ಲೆಯ 12 ಪರೀಕ್ಷಾ ಕೇಂದ್ರಗಳ ಸುತ್ತಲೂ ಪೆÇಲೀಸ್ ಭದ್ರತೆಯನ್ನು ಒದಗಿಸಬೇಕು, ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ಜರುಗದಂತೆ ಪಾರದರ್ಶಕವಾಗಿ ನಡೆಸಬೇಕು ಎಂದು ತಿಳಿಸಿದರು.

ರಾಯಚೂರು ತಾಲೂಕಿನಲ್ಲಿ ವಿದ್ಯಾನಿಧಿ ಪದವಿಪೂರ್ವ ಕಾಲೇಜು, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಪ್ರಮಾಣ ಪದವಿ ಪೂರ್ವ ಕಾಲೇಜು, ಬಾಲಕೀಯರ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಟ್ಯಾಗೂರ ಪದವಿಪೂರ್ವ ಕಾಲೇಜಿನಲ್ಲಿ ಪರೀಕ್ಷೆಗಲು ನಡೆಯಲಿವೆ. ಲಿಂಗಸುಗೂರಿನ ಶ್ರೀಮತಿ ಹೆಚ್.ಎಸ್.ಗೌಡ ಪದವಿಪೂರ್ವ ಕಾಲೇಜು, ಶ್ರೀ ಬಸವೇಶ್ವರ ಪದವಿಪೂರ್ವ ಕಾಲೇಜು, ದೇವದುರ್ಗದ ಬಾಲಕರ ಪದವಿಪೂರ್ವ ಕಾಲೇಜು, ಸಿಂಧನೂರಿನ ಬಾಲಕರ ಪದವಿಪೂರ್ವ ಕಾಲೇಜು, ಆರ್.ಜಿ.ಎಂ ಪದವಿಪೂರ್ವ ಕಾಲೇಜು, ಮಾನವಿಯ ಲೋಯೋಲಾ ಪದವಿಪೂರ್ವ ಕಾಲೇಜು, ಬಾಲಕೀಯರ ಸರ್ಕಾರಿ ಪದವಿಪೂರ್ವ ಕಾಲೇಜು ಸೇರಿದಂತೆ ಒಟ್ಟು 12 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಸಲಾಗುತ್ತಿದ್ದು, ಇವುಗಳಲ್ಲಿ ರಾಯಚೂರಿನ 01 ಹಾಗೂ ದೇವದುರ್ಗದ 1 ಕೇಂದ್ರಗಳನ್ನು ಸೂಕ್ಷ್ಮ ಮತ್ತು ಕೇಂದ್ರಗಳನ್ನಾಗಿಸಲಾಗಿದೆ ಎಂದರು.

ಒಟ್ಟಾರೆಯಾಗಿ ಏ.29 ರಿಂದ ಮೇ16ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಬೇಕೆಂದು ಸೂಚಿಸಿದರು.


 rajesh pande