ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ
ನವದೆಹಲಿ, 27 ಏಪ್ರಿಲ್ (ಹಿ.ಸ):ಆ್ಯಂಕರ್:ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡ
ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ


ನವದೆಹಲಿ, 27 ಏಪ್ರಿಲ್ (ಹಿ.ಸ):ಆ್ಯಂಕರ್:ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್ನಲ್ಲಿ ಸೋಮವಾರದೊಳಗೆ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande