ಮುಸ್ಲಿಂರಿಗೆ ಒಬಿಸಿ ಮೀಸಲಾತಿ ಸತ್ಯ, ನನ್ನ ಬಳಿ ದಾಖಲೆ ಇದೆ - ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ , 27 ಏಪ್ರಿಲ್ (ಹಿ.ಸ):ಆ್ಯಂಕರ್:ರಾಜ್ಯದಲ್ಲಿ ಒಬಿಸಿ, ಎಸ್ಸಿ-ಎಸ್ಟಿ ಮೀಸಲಾತಿ ಕಬಳಿಸಿ ಮುಸ್ಲಿಂರಿಗೆ ಕೊಡ


fwefwfweಹುಬ್ಬಳ್ಳಿ , 27 ಏಪ್ರಿಲ್ (ಹಿ.ಸ):ಆ್ಯಂಕರ್:ರಾಜ್ಯದಲ್ಲಿ ಒಬಿಸಿ, ಎಸ್ಸಿ-ಎಸ್ಟಿ ಮೀಸಲಾತಿ ಕಬಳಿಸಿ ಮುಸ್ಲಿಂರಿಗೆ ಕೊಡುತ್ತಿರುವುದು ಸತ್ಯ. ನಮ್ಮ ಬಳಿ ದಾಖಲೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅಧಿಕಾರಕ್ಕೆ ಬರುತ್ತಲೇ ನ್ಯಾಷನಲ್ ಒಬಿಸಿ ಕಮಿಷನ್ ಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ಮುಖ್ಯಮಂತ್ರಿ ಹಾಜರಾಗುವಂತೆ ಒಬಿಸಿ ಕಮಿಷನರ್ ನೀಡಿದ ನೋಟಿಸ್ ನನ್ನ ಬಳಿ ಇದೆ. ಒಬಿಸಿ ಕಮಿಷನ್ ಗೆ ಮುಖ್ಯಮಂತ್ರಿ ಪತ್ರ ಬರೆದಿಲ್ಲ ಎಂದಾದರೆ ಹಂಸರಾಜ್ ನೀಡಿರುವ ನೋಟಿಸ್ ಗೆ ಉತ್ತರ ಕೊಡಲಿ ಎಂದು ಸವಾಲು ಹಾಕಿದರು.

ಈಗ ಚುನಾವಣೆ ಕಾರಣದಿಂದ, ದಲಿತ ಒಬಿಸಿ ಮೀಸಲಾತಿ ಕಬಳಿಸುತ್ತಿಲ್ಲ. ಮುಸ್ಲಿಂರಿಗೆ ನೀಡುತ್ತಿಲ್ಲ ಎಂದು ಹಸಿ ಸುಳ್ಳು ಹೇಳುತ್ತಿದ್ದಾರೆ. ಎಸ್ಸಿ, ಎಸ್ಟಿ ಮೀಸಲಾತಿಯನ್ನು ಕಬಳಿಸಿ ತಮ್ಮ ವೋಟ್ ಬ್ಯಾಂಕ್ ಆದ ಮುಸ್ಲಿಂರಿಗೆ ಕೊಡುತ್ತಿರುವುದು ಅತ್ಯಂತ ಅಪಾಯಕಾರಿ ಬೆಳವಣಿಗೆ ಎಂದ ಅವರು, ಧರ್ಮಾಧಾರಿತ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶವಿಲ್ಲ. ಸುಪ್ರೀಂ ಕೋರ್ಟ್ ಸಹ ಇದನ್ನು ಸ್ಪಷ್ಟಪಡಿಸಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande