ಬರ ಪರಿಹಾರ ಸಾಕು ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ -ಡಿ.ಕೆ. ಶಿವಕುಮಾರ್
ಬೆಂಗಳೂರು, 27 ಏಪ್ರಿಲ್ (ಹಿ.ಸ):ಆ್ಯಂಕರ್: “ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು,
ಬರ ಪರಿಹಾರ ಸಾಕು ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ -ಡಿ.ಕೆ. ಶಿವಕುಮಾರ್


ಬೆಂಗಳೂರು, 27 ಏಪ್ರಿಲ್ (ಹಿ.ಸ):ಆ್ಯಂಕರ್:

“ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು ನಮ್ಮ ಕಾನೂನು ಹೋರಾಟ ಮುಂದುವರಿಸುತ್ತೇವೆ. ಈ ಮಧ್ಯೆ, ಈಗ ಬಿಡುಗಡೆ ಮಾಡಿರುವ ಪರಿಹಾರ ಮೊತ್ತ ಸಾಕು ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ನಾಡ ವಿರೋಧಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶಿವಕುಮಾರ್ ಅವರು ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬರ ಪರಿಹಾರ ಘೋಷಿಸಿರುವ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

“ಕೇಂದ್ರ ಸರ್ಕಾರದ ಹಣ ರಾಜ್ಯಕ್ಕೆ ಇನ್ನು ಬಂದಿಲ್ಲ. ಆದರೂ ಬಿಜೆಪಿ ನಾಯಕರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಮಧ್ಯೆ ಕುಮಾರಸ್ವಾಮಿ ಅವರು ಈ ಮೊತ್ತ ಸಾಕು ಎಂದಿದ್ದಾರೆ. ಇದು ರಾಜ್ಯಕ್ಕೆ ಬರಬೇಕಾದ ಪರಿಹಾರ ಮೊತ್ತವೇ ಹೊರತು, ಇಷ್ಟು ಸಾಕು ಎನ್ನಲು ಇದು ಅವರ ಮನೆ ಆಸ್ತಿಯಲ್ಲ. ಇಂತಹ ಹೇಳಿಕೆ ಕೊಟ್ಟಿರುವ ಕುಮಾರಸ್ವಾಮಿ ನಾಡದ್ರೋಹಿ.

ನೀವು ಜನಪ್ರತಿನಿಧಿಯಾಗಿ ನಿಮ್ಮ ಮೈತ್ರಿ ಸರ್ಕಾರಕ್ಕೆ ಹೇಳಿ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಸಿಗುವಂತೆ ಮಾಡಬೇಕು. ಆದರೆ ಅವರು ಇಷ್ಟು ಪರಿಹಾರ ಸಾಕು ಎಂದು ಹೇಳಿದ್ದಾರೆ. ಇದು ಪಕ್ಷ ಅಥವಾ ರಾಜಕೀಯ ವಿಚಾರವಲ್ಲ. ರಾಜ್ಯಕ್ಕೆ ಆಗುತ್ತಿರುವ ದ್ರೋಹ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ರಾಜ್ಯವನ್ನು ಕಡೆಗಣಿಸಲಾಗುತ್ತಿದೆ.

ನಮ್ಮ ರಾಜ್ಯದಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಸೆಪ್ಟೆಂಬರ್ 13, 2023ರಂದು ಸರ್ಕಾರ ಘೋಷಣೆ ಮಾಡಿತ್ತು. ಬರಗಾಲದ ಹಿನ್ನೆಲೆಯಲ್ಲಿ 46 ಲಕ್ಷ ಹೆಕ್ಟೇರ್ ಕೃಷಿ ಭೂಮಿ, 2.06 ಲಕ್ಷ ಹೆಕ್ಟೇರ್ ತೋಟಗಾರಿಕ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಒಟ್ಟಾರೆಯಾಗಿ 35 ಸಾವಿರ ಕೋಟಿಯಷ್ಟು ನಷ್ಟವಾಗಿದ್ದು, ಎನ್ ಡಿಆರ್ ಎಫ್ ಮಾರ್ಗಸೂಚಿ ಅನುಸಾರ ಕರ್ನಾಟಕ ರಾಜ್ಯ ಸರ್ಕಾರ 2024ರ ಸೆಪ್ಟೆಂಬರ್ 22ರಂದು ಕೇಂದ್ರ ಸರ್ಕಾರಕ್ಕೆ 18,172 ಕೋಟಿ ಬರ ಪರಿಹಾರ ನೀಡುವಂತೆ ಮನವಿ ಮಾಡಿತ್ತು.

ಅಕ್ಟೋಬರ್ 25ರಂದು ನಮ್ಮ ಸರ್ಕಾರದ ಸಚಿವರುಗಳು ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದ್ದರು. ನವೆಂಬರ್ 25ರಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಹಾಗೂ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಕೇಂದರ ಹಣಕಾಸು ಸಚಿವರನ್ನು ಭೇಟಿ ಮಾಡಿ ತಕ್ಷಣವೇ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande