ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಕೆಲವೇ ಹೊತ್ತಲ್ಲಿ ಎಸ್ ಐ ಟಿ ರಚನೆ: ಪರಮೇಶ್ವರ್
ಬೆಂಗಳೂರು, 28 ಏಪ್ರಿಲ್ (ಹಿ.ಸ): ಆ್ಯಂಕರ್:ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಗಂಭೀರವ
ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಪರಮೇಶ್ವರ್‌


ಬೆಂಗಳೂರು, 28 ಏಪ್ರಿಲ್ (ಹಿ.ಸ): ಆ್ಯಂಕರ್:ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇನ್ನು ಕೆಲವೇ ಹೊತ್ತಲ್ಲಿ ಅಧಿಕೃತವಾಗಿ ವಿಶೇಷ ತನಿಖಾ ತಂಡ ರಚನೆಯಾಗಲಿದೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್ ಐ ಟಿ ತನಿಖೆ ನಡೆಸುತ್ತೇವೆ. ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ಹೋಗಿರುವ ಬಗ್ಗೆ ಮಾಹಿತಿ ಇದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande