ತುಕಾರಾಂ ಪರ ಮತ ಯಾಚಿಸಿದ ಚಾನಾಳ್ ಶೇಖರ್
ಬಳ್ಳಾರಿ, 28 ಏಪ್ರಿಲ್ (ಹಿ.ಸ): ಆ್ಯಂಕರ್: ಬಳ್ಳಾರಿ ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತು
asks for vote for Modithukaram


ಬಳ್ಳಾರಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:

ಬಳ್ಳಾರಿ ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಈ.ತುಕಾರಾಂ ಅವರ ಪರ ಬಳ್ಳಾರಿ ನಗರದ 21ನೇ ವಾರ್ಡಿನಲ್ಲಿ ಭರ್ಜರಿ ಪ್ರಚಾರ ನಡೆಸಲಾಯಿತು.

ಕರವೇ ರಾಜ್ಯ ಉಪಾಧ್ಯಕ್ಷ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ, ಕಾಂಗ್ರೆಸ್ ಮುಖಂಡ ಚಾನಾಳ್ ಶೇಖರ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಮನೆ ಮನೆ ತೆರಳಿ ಮತ ಯಾಚನೆ ನಡೆಸಿದರು.

ಈ ವೇಳೆ ಮತದಾರರನ್ನುದ್ಧೇಶಿಸಿ ಮಾತನಾಡಿದ ಅವರು; ಕಾಂಗ್ರೆಸ್ ಪಕ್ಷ ಸರ್ವ ಜನಾಂಗದ ಹಿತ ಬಯಸುವ ಪಕ್ಷ. ಎಲ್ಲ ಜಾತಿ, ಧರ್ಮದ ಜನರಿಗೆ ನ್ಯಾಯ ಒದಗಿಸುವ ಪಕ್ಷ ಎಂದು ಹೇಳಿದರು.

ಕ್ರಾಂತಿಕಾರಿ ಬಸವಣ್ಣ ಅವರನ್ನು ನಾಡಿನ ಸಾಂಸ್ಕೃತಿಕ ರಾಯಭಾರಿ ಎಂದು ಘೋಷಿಸಿದ ರಾಜ್ಯ ಸರ್ಕಾರ, ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕುವಂತೆ ಸಿಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದನ್ನು ಲಿಂಗಾಯತ ಸಮುದಾಯ ಮರೆಯುವಂತಿಲ್ಲ ಎಂದು ಹೇಳಿದರು.

ಕೊಟ್ಟ ಮಾತಿನಂತೆ 9 ತಿಂಗಳ ಅವಧಿಯಲ್ಲಿ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಐತಿಹಾಸಿಕ ಆಡಳಿತವನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೀಡಿದ್ದಾರೆ ಎಂದು ಚಾನಾಳ್ ಶೇಖರ್ ಹೇಳಿದರು.

ಕಾಲುವೆ ಗಡ್ಡೆ, ಅಗಸರ ಓಣಿ, ಕೆಇಬಿ ಸರ್ಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ ಅವರ ಪರ ಮತ ಯಾಚನೆ ನಡೆಸಲಾಯಿತು.

ಹೆಚ್ ಎಸ್ ಹಿರೇಮಠ, ಕಗ್ಗಲ್ ಮಂಜುನಾಥ್ ಸ್ವಾಮಿ, ಕಾಲುವೆಗಡ್ಡೆ ಸೂರಿ, ಶೇಖರ್ ಮೊದಲಾದವರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande