ಬರಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪಾಲಿಸಿಲ್ಲ : ಸಿದ್ದು ವಾಗ್ದಾಳಿ
ಬೆಂಗಳೂರು, 28 ಏಪ್ರಿಲ್ (ಹಿ.ಸ): ಆ್ಯಂಕರ್:ಬರಪರಿಹಾರ ಪಾವತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ನಡೆದುಕೊ
45


ಬೆಂಗಳೂರು, 28 ಏಪ್ರಿಲ್ (ಹಿ.ಸ): ಆ್ಯಂಕರ್:ಬರಪರಿಹಾರ ಪಾವತಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಸುಪ್ರೀಂಕೋರ್ಟ್ ನ ಮೆಟ್ಟಿಲೇರಿದ ಮೇಲೆ ಅನಿವಾರ್ಯವಾಗಿ ಪರಿಹಾರ ನೀಡುವುದಾಗಿ ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ನೀಡಿರುವ ಬರಪರಿಹಾರದ ಮೊತ್ತ ಕಡಿಮೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎನ್ಡಿಆರ್ಎಫ್ ನಿಯಮಾವಳಿ ಪ್ರಕಾರ, ಬರ ಘೋಷಣೆಗಾಗಿ ಮನವಿ ಸಲ್ಲಿಸಿದ ವಾರದೊಳಗಾಗಿ ಕೇಂದ್ರದ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಬೇಕು, ವರದಿ ನೀಡಿದ ಒಂದು ತಿಂಗಳ ಒಳಗೆ ಪರಿಹಾರ ನೀಡಬೇಕು.

ರಾಜ್ಯಸರ್ಕಾರ ಸೆ. 22 ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆನಂತರ ತಾವು ಖುದ್ದಾಗಿ ಡಿ.19 ರಂದು ಪ್ರಧಾನಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಆದರೆ ಈವರೆಗೂ ಹಣ ಬಿಡುಗಡೆಯಾಗಿಲ್ಲ ಎಂದು ಹೇಳಿದರು.

ಹಿಂದೂಸ್ತಾನ್ ಸಮಾಚಾರ್


 rajesh pande