ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ
ನವದೆಹಲಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನ
rvinder Singh Lovely Resigns As Delhi Congress Chi


ನವದೆಹಲಿ, 28 ಏಪ್ರಿಲ್ (ಹಿ.ಸ): ಆ್ಯಂಕರ್:ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಲೋಕಸಭೆ ಚುನಾವಣೆ ಗೂ ಮುನ್ನ ದೆಹಲಿಯಲ್ಲಿ ಕಾಂಗ್ರೆಸ್ ಭಾರೀ ಹಿನ್ನೆಡೆ ಅನುಭವಿಸಿದೆ.

ಪಕ್ಷದ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕವು ವಿರುದ್ಧವಾಗಿದೆ ಎಂದು ಅರವಿಂದರ್ ಲವ್ಲಿ ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ. ಇದರ ಹೊರತಾಗಿಯೂ ದೆಹಲಿಯಲ್ಲಿ ಆಪ್ ಜೊತೆ ಮೈತ್ರಿ ಮಾಡಿಕೊಳ್ಳಲು ಪಕ್ಷ ನಿರ್ಧರಿಸಿದೆ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande