ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿ,ಕೋಲ್ಕತ್ತಾ ನೈಟ್ ರೈಡರ್ಸ್ - ಡೆಲ್ಲಿ ಕಾಪಿಟಲ್ಸ್ ಮುಖಾಮುಖಿ
ಕೋಲ್ಕತ್ತಾ, 29 ಏಪ್ರಿಲ್ (ಹಿ.ಸ):ಆ್ಯಂಕರ್: ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿಯ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣ
ಾಿೈಾ


ಕೋಲ್ಕತ್ತಾ, 29 ಏಪ್ರಿಲ್ (ಹಿ.ಸ):ಆ್ಯಂಕರ್:

ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿಯ ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಸನ್ ರೈಸರ್ಸ್ ಹೈದರಾಬಾದ್ ತಂಡದೆದುರು ೭೮ ರನ್ಗಳ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ನಿಗದಿತ ೨೦ ಓವರ್ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೨೧೨ ರನ್ ಗಳಿಸಿತು. ೫೪ ಎಸೆತಗಳಲ್ಲಿ ೯೮ ರನ್ ಗಳಿಸಿದ ಋತುರಾಜ್ ಗಾಯಕ್ವಾಡ್ ಹಾಗೂ ೩೨ ಎಸೆತಗಳಲ್ಲಿ ೫೨ ರನ್ ಗಳಿಸಿದ ಡೆರಿಲ್ ಮಿಚೆಲ್ ತಂಡದ ಮೊತ್ತ ಹಿಗ್ಗಿಸುವಲ್ಲಿ ಪ್ರಮುಖ ಪಾತ್ರವಹಿಸಿದರು. ೨೧೩ ರನ್ ಗಳ ಗುರಿ ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ೧೮.೫ ಓವರ್ಗಳಲ್ಲಿ ೧೩೪ ರನ್ ಗಳಿಸಿ ಸರ್ವಪತನ ಕಂಡಿತು. ಚೆನ್ನೈ ಪರ ತುಷಾರ್ ದೇಶಪಾಂಡೆ ೪, ಮತೀಷಾ ಪಾಥಿರಾಣಾ ಹಾಗೂ ಮುಸ್ತಫಿಸುರ್ ರೆಹಮಾನ್ ೨ ವಿಕೆಟ್ ಪಡೆದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದಕ್ಕೂ ಮುನ್ನ, ಅಹಮದಾಬಾದ್ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಗುಜರಾತ್ ಟೈಟನ್ಸ್ ವಿರುದ್ಧ ೯ ವಿಕೆಟ್ಗಳ ಜಯ ದಾಖಲಿಸಿತು.

ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ಸಂಜೆ ೭.೩೦ಕ್ಕೆ ಆರಂಭವಾಗಲಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande