ನಟ ವಿಷ್ಣುವರ್ಧನ್ ನೆನಪಲ್ಲಿ 'ಯಜಮಾನ' ಪ್ರೀಮಿಯರ್ ಲೀಗ್
ಬೆಂಗಳೂರು, 29 ಏಪ್ರಿಲ್ (ಹಿ.ಸ):ಆ್ಯಂಕರ್:ಯಜಮಾನ ಪ್ರೀಮಿಯರ್ ಲೀಗ್ ಮತ್ತೆ ಬಂದಿದೆ. ಇದು ಅಭಿಮಾನಿಗಳಿಂದ ಅಭಿಮಾನಿಗಳಿಗ
an-is-remembered-as-the-yajamana-


ಬೆಂಗಳೂರು, 29 ಏಪ್ರಿಲ್ (ಹಿ.ಸ):ಆ್ಯಂಕರ್:ಯಜಮಾನ ಪ್ರೀಮಿಯರ್ ಲೀಗ್ ಮತ್ತೆ ಬಂದಿದೆ. ಇದು ಅಭಿಮಾನಿಗಳಿಂದ ಅಭಿಮಾನಿಗಳಿಗಾಗಿ ಅಭಿಮಾನಿಗಳಿಗೋಸ್ಕರ್ ನಡೆಯುವ ಕ್ರಿಕೆಟ್ ಪಂದ್ಯಾವಳಿ. ಕಳೆದೆರೆಡು ವರ್ಷಗಳಿಂದ ಯಶಸ್ವಿ ಆಯೋಜಿಸಿಕೊಂಡು ಬರ್ತಿರುವ ವೈಪಿಎಲ್ ಮೇ 4 ಮತ್ತು 5 ರಂದು ಎರಡು ದಿನಗಳ ಕಾಲ ನಡೆಯುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಎಂಎಂ ಲೆಗಸಿನಲ್ಲಿ ಜರ್ಸಿ ಬಿಡುಗಡೆ ಮಾಡಲಾಯಿತು. ನಟ ಜಯರಾಮ್ ಕಾರ್ತಿಕ್ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

ಇದೇ ವೇಳೆ ನಟ ಜಯರಾಮ್ ಕಾರ್ತಿಕ್ ಮಾತನಾಡಿ, ವಿಷ್ಣು ಸೇನಾ ಸಮಿತಿಗೆ ವಂದನೆಗಳು. ಇದು ಯಜಮಾನ ಪ್ರೀಮಿಯರ್ ಲೀಗ್ ನ ಮೂರನೇ ಸೀಸನ್. ಒಂದು ಕ್ರಿಕೆಟ್ ಪಂದ್ಯಾವಳಿ ನಡೆಸುವುದು ಕಷ್ಟ. ಇದೆಲ್ಲಾ ಫ್ಯಾನ್ಸ್ ಸೇರಿಕೊಂಡು ಮೂರು ವರ್ಷದ ಹಿಂದೆ ಶುರು ಮಾಡಿದರು. ಈಗ ಮೂರನೇ ಸೀಸನ್. ನನ್ನ ಪ್ರೀತಿಯ ಅಚ್ಚುಮೆಚ್ಚಿನ ಆಕ್ಟರ್ ವಿಷ್ಣು ಅವರ ಹೆಸರಿನಲ್ಲಿ ಪಂದ್ಯಾವಳಿ ನಡೆಯುತ್ತಿದೆ. ಯಜಮಾನ ಪ್ರೀಮಿಯರ್ ಲೀಗ್ ಟೈಟಲ್ ಚೆನ್ನಾಗಿದೆ. ಇದು ನಮ್ಮ ಹೃದಯಕ್ಕೆ ಹತ್ತಿರವಾಗಿದೆ. ನಮಗೆ ವಿಷ್ಣು ಸ್ಫೂರ್ತಿ. ವೈಪಿಎಲ್ ನಲ್ಲಿ ಭಾಗವಹಿಸಲಿರುವ ಇಡೀ ತಂಡಕ್ಕೆ ಆಲ್ ದಿ ಬೆಸ್ಟ್ ಎಂದರು.

ಹಿಂದೂಸ್ತಾನ್ ಸಮಾಚಾರ್


 rajesh pande