ಶ್ರೀನಿವಾಸ್ ಪ್ರಸಾದ್ ನಡೆದು ಬಂದ ರಾಜಕೀಯ ಹಾದಿ ಇಲ್ಲಿದೆ
ಚಾಮರಾಜನಗರ, 29 ಏಪ್ರಿಲ್ (ಹಿ.ಸ):ಆ್ಯಂಕರ್: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದಾರೆ. ಬೆಂಗಳೂರಿನ
p-chamarajanagar-mp-srinivas-prasad-no-more/


ಚಾಮರಾಜನಗರ, 29 ಏಪ್ರಿಲ್ (ಹಿ.ಸ):ಆ್ಯಂಕರ್:

ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 1.20ಕ್ಕೆ ನಿಧನರಾಗಿದ್ದಾರೆ.

1947ರಲ್ಲಿ ಜನಿಸಿದ ಶ್ರೀನಿವಾಸ್ ಪ್ರಸಾದ್

76 ವರ್ಷ ವಯಸ್ಸಿನ ಶ್ರೀನಿವಾಸ್ ಪ್ರಸಾದ್ ಅವರು ಪೂರ್ಣ ಹೆಸರು ವೆಂಕಟಯ್ಯ ಶ್ರೀನಿವಾಸ್ ಪ್ರಸಾದ್. 1947 ಜನಿಸಿದರು. ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಂಡಿದ್ದ ಇವರು ನಂಜನಗೂಡು ಕ್ಷೇತ್ರವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದರು. ಚಾಮರಾಜನಗರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆರು ಬಾರಿ ಸಂಸದರರಾಗಿದ್ದರು. 2008, 2013ರಲ್ಲಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಾಜಪೇಯಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಕಾಂಗ್ರೆಸ್ನಿಂದ ಬಂದು ಬಿಜೆಪಿ ಸೇರಿದರು

ಶ್ರೀನಿವಾಸ್ ಪ್ರಸಾದ್ ಮೂಲತಃ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ ಬಂದವರು. ಆ ಬಳಿಕ ಜನತಾ ದಳ ಸೇರಿದ್ದರು. ನಂತರ ಅವರು ಕಾಂಗ್ರೆಸ್ಗೆ ಮರಳಿದರು ಮತ್ತು 2013 ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾದರು. ಮತ್ತೆ ತಮ್ಮ ಪಕ್ಷವನ್ನು ಬದಲಾಯಿಸುವ ಮೂಲಕ 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರಿದರು.

ಶ್ರೀನಿವಾಸ್ ಪ್ರಸಾದ್ ಅವರು ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಕಾರ್ಯ ನಿರ್ವಹಿಸಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿ ಗುರುತಿಸಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ 1999- ಭಾರತ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದರು.

ಶ್ರೀನಿವಾಸ್ ಪ್ರಸಾದ್ 1974 ರ ಮಾರ್ಚ್ 17 ರಂದು ರಾಜಕೀಯಕ್ಕೆ ಧುಮುಕಿದರು. ಮೈಸೂರಿನ ಕೃಷ್ಣರಾಜ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ವಿ. ಶ್ರೀನಿವಾಸ ಪ್ರಸಾದ್ ಅವರು ಪ್ರಥಮ ಬಾರಿಗೆ ಪಕ್ಷೇತರ ಅಭ್ಯಥಿ೯ಯಾಗಿ ಕಣಕ್ಕಿಳಿದರು. ಅಂದು ‘ಒಂಟೆ’ ಗುರುತಿನಿಂದ ಸ್ಪಧಿ೯ಸಿದ್ದರು. ಅವರ ಸ್ಪರ್ಧೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ಗಮನ ಸೆಳೆದಿತ್ತು.

ಅಚ್ಚರಿ ಸಂಗತಿ ಎಂದರೆ 1974ರಿಂದ ಪ್ರಾರಂಭಿಸಿ 2019ರ ಲೋಕಸಭಾ ಚುನಾವಣೆಬರೆಗೂ ಸ್ಪರ್ಧಿಸುತ್ತಾ ಬಂದಿದ್ದಾರೆ. ಅಂದ ಹಾಗೆಯೇ ಒಟ್ಟು 14 ಬಾರಿ ಸ್ಪರ್ಧಿಸಿದ್ದರು. ಉಪಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆಯವರೆಗೂ ಸ್ಪರ್ಧೆ ಮಾಡಿದ್ದರು. 6 ಬಾರಿ ಲೋಕಸಭಾ ಚುನಾವಣೆ ಮತ್ತು ಎರಡು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಕಂಡಿದ್ದರು.

ಚಾಮರಾಜನಗರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆರು ಬಾರಿ ಸಂಸದರರಾಗಿದ್ದರು. 2008, 2013ರಲ್ಲಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಾಜಪೇಯಿ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಆದರೆ ಅನಾರೋಗ್ಯಕ್ಕೆ ತುತ್ತಾದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನದನಪ್ಪಿದ್ದಾರೆ.

ದಲಿತಪರ ಹೋರಾಟಗಾರ

ಶ್ರೀನಿವಾಸ್ ಪ್ರಸಾದ್ ಮೂಲತಃ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ ಬಂದವರು. ಆ ಬಳಿಕ ಜನತಾ ದಳ ಸೇರಿದ್ದರು. ನಂತರ ಅವರು ಕಾಂಗ್ರೆಸ್ಗೆ ಮರಳಿದರು ಮತ್ತು 2013 ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾದರು. ಮತ್ತೆ ತಮ್ಮ ಪಕ್ಷವನ್ನು ಬದಲಾಯಿಸುವ ಮೂಲಕ 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರಿದರು.

ಶ್ರೀನಿವಾಸ್ ಪ್ರಸಾದ್ ಅವರು ಸಿದ್ದರಾಮಯ್ಯ ಅವರ ಸರ್ಕಾರದಲ್ಲೂ ಕಾರ್ಯ ನಿರ್ವಹಿಸಿದ್ದಾರೆ. 2013 ರಿಂದ 2016 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿ ಗುರುತಿಸಿಕೊಂಡಿದ್ದರು. ಅಷ್ಟು ಮಾತ್ರವಲ್ಲದೆ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ 1999- ಭಾರತ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದರು.

ರಾಜಕೀಯ ಹೆಜ್ಜೆಯ ಜೊತೆಗೆ ಶ್ರೀನಿವಾಸ್ ಪ್ರಸಾದ್ ಅಂಬೇಡ್ಕರ್ ಚಿಂತನೆ, ದಲಿತಪರ ಹೋರಾಟದ ಮುಖ್ಯ ಧ್ವನಿಯಾಗಿದ್ದರು.

ಹಿಂದೂಸ್ತಾನ್ ಸಮಾಚಾರ್


 rajesh pande