ನಾಳೆಯಿಂದ 'ರಿಚರ್ಡ್ ಆಂಟನಿ' ಚಿತ್ರೀಕರಣ ಪ್ರಾರಂಭ
ಬೆಂಗಳೂರು, 30 ಏಪ್ರಿಲ್ (ಹಿ.ಸ):ಆ್ಯಂಕರ್:ರಕ್ಷಿತ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ರಿಚರ್ಡ್ ಆಂಟನಿ ಸಿನಿ
f-richard-antony-will-start-from-tomorrow


ಬೆಂಗಳೂರು, 30 ಏಪ್ರಿಲ್ (ಹಿ.ಸ):ಆ್ಯಂಕರ್:ರಕ್ಷಿತ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ರಿಚರ್ಡ್ ಆಂಟನಿ ಸಿನಿಮಾದ ಶೂಟಿಂಗ್ ನಾಳೆಯಿಂದ ಶುರುವಾಗಲಿದೆ. ಮೇ 1ರಿಂದ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವುದಾಗಿ ಸ್ವತಃ ರಕ್ಷಿತ್ ಅವರೇ ಮಾಹಿತಿ ನೀಡಿದ್ದಾರೆ. ಮೊನ್ನೆ ಉಡುಪಿಯಲ್ಲಿ ಮತದಾನ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ನಮ್ ಟೀಮ್ ಉಡುಪಿ ತಲುಪಲಿದೆ. ಮೇ 1 ರಿಂದ ಚಿತ್ರೀಕರಣ ಶುರು ಮಾಡುತ್ತೇವೆ ಎಂದಿದ್ದಾರೆ.

1980-90 ರ ದಶಕದಲ್ಲಿ ನಡೆಯುವ ಕಥೆ ಇದಾಗಿದ್ದರಿಂದ ಆಯಾ ಕಾಲಘಟ್ಟವನ್ನು ಕಟ್ಟಿಕೊಡುವ ಪ್ರಯತ್ನವನ್ನೂ ಅವರು ಮಾಡಲಿದ್ದಾರಂತೆ. ಹಾಗಾಗಿ ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದಾರಂತೆ. ಶೇಕಡಾ 50 ರಷ್ಟು ಚಿತ್ರೀಕರಣ ಉಡುಪಿ ಸುತ್ತಮುತ್ತ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್


 rajesh pande