ಐಪಿಎಲ್ ಟಿ-೨೦,ಲಖನೌ ಸೂಪರ್ ಜೈಂಟ್ಸ್-ಮುಂಬೈ ಇಂಡಿಯನ್ಸ್ ಮುಖಾಮುಖಿ
ಲಖನೌ, 30 ಏಪ್ರಿಲ್ (ಹಿ.ಸ):ಆ್ಯಂಕರ್: ಕೋಲ್ಕೊತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-
h-scorecard-online-at-eden-gard


ಲಖನೌ, 30 ಏಪ್ರಿಲ್ (ಹಿ.ಸ):ಆ್ಯಂಕರ್:

ಕೋಲ್ಕೊತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-೨೦ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಕೋಲ್ಕೊತಾ ನೈಟ್ ರೈಡರ್ಸ್ ತಂಡ ೭ ವಿಕೆಟ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಜಯಗಳಿಸಿತು.

ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ೯ ವಿಕೆಟ್ ನಷ್ಟಕ್ಕೆ ೧೫೩ ರನ್ ಗಳಿಸಿತು. ತಂಡದ ಪರ ಕುಲ್ದೀಪ್ ಯಾದವ್ ಅಜೇಯ ೩೫ ರನ್ಗಳಿಸಿದ್ದೇ ವೈಯಕ್ತಿಕ ಗರಿಷ್ಠ ಮೊತ್ತವಾಯಿತು.

ಕೋಲ್ಕೊತಾ ನೈಟ್ ರೈಡರ್ಸ್ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ವರುಣ್ ಚಕ್ರವರ್ತಿ ೩ ವಿಕೆಟ್ ಪಡೆದರೆ, ವೈಭವ್ ಅರೋರಾ ಮತ್ತು ಹರ್ಷಿತ್ ರಾಣಾ ತಲಾ ೨ ವಿಕೆಟ್ ಉರುಳಿಸಿದರು.

ಉತ್ತರವಾಗಿ ೧೫೪ ರನ್ಗಳ ಗುರಿ ಬೆನ್ನತ್ತಿದ ಕೋಲ್ಕೊತಾ ನೈಟ್ ರೈಡರ್ಸ್ ೧೬.೩ ಓವರುಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೧೫೭ ರನ್ಗಳಿಸಿ ವಿಜಯೋತ್ಸವ ಆಚರಿಸಿತು.

ಅರ್ಧಶತಕ ಗಳಿಸಿದ ಆರಂಭಿಕ ಆಟಗಾರ ಫಿಲ್ ಸಾಲ್ಟ್ ೬೮ ರನ್ಗಳಿಸಿ ಕೋಲ್ಕೊತಾ ತಂಡದ ನಿರಾಯಾಸ ಗೆಲುವಿಗೆ ಕಾರಣರಾದರು.

ಲಖನೌದಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ ೭.೩೦ಕ್ಕೆ ಆರಂಭವಾಗಲಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande