2024ರ ಲೋಕಸಭಾ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್
ನವದೆಹಲಿ, 5 ಏಪ್ರಿಲ್ (ಹಿ.ಸ): ಆ್ಯಂಕರ್ : ಮುಂಬರಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಯನ್ನ
ೇನೇ್ೇ


ನವದೆಹಲಿ, 5 ಏಪ್ರಿಲ್ (ಹಿ.ಸ):

ಆ್ಯಂಕರ್ :

ಮುಂಬರಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆ ಯನ್ನು ಬಿಡುಗಡೆ ಮಾಡಿದೆ. ಲೋಕಸಭೆ ಚುನಾವಣೆಯ ರಣಕಹಳೆ ಮೊಳಗುತ್ತಿದ್ದಂತೆಯೇ ಎಲ್ಲ ಪಕ್ಷಗಳು ಜನತೆಗೆ ಭರವಸೆಗಳ ಸರಮಾಲೆಯನ್ನೇ ನೀಡಲಾರಂಭಿಸಿವೆ. ಕಾಂಗ್ರೆಸ್ ಕೂಡ ಚುನಾವಣಾ ರ್ಯಾಲಿಗಳಲ್ಲಿ ಜನರಿಗೆ ಹಲವು ಭರವಸೆಗಳನ್ನು ನೀಡಿದೆ. ಈ ನಡುವೆ ಇಂದು ಕಾಂಗ್ರೆಸ್ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಕೊಟ್ಟಿರುವ ಗ್ಯಾರಂಟಿಗಳೇನು? ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯಲ್ಲಿ ಪಕ್ಷವು ಪಂಚ ನ್ಯಾಯ ಮತ್ತು 25 ಭರವಸೆಗಳನ್ನು ಭರವಸೆ ನೀಡಿದೆ.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ‘ಯುವ ನ್ಯಾಯ’, ‘ನಾರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು ‘ಹಿಸ್ಸೆದಾರಿ ನ್ಯಾಯ’ ಹಾಗೂ ಖಾತರಿಗಳು ಸೇರಿದಂತೆ ಪಂಚ ನ್ಯಾಯ ಅಥವಾ ನ್ಯಾಯದ ಐದು ಸ್ತಂಭಗಳಿಗೆ ಒತ್ತು ನೀಡಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande