ಶ್ರೀರಾಮ ಲಲ್ಲಾ ಸಮಾರಂಭಕ್ಕೆ ರಾಷ್ಟ್ರಪತಿ ಅವರನ್ನು ಆಹ್ವಾನಿಸಿಲ್ಲ ಎಂದು ರಾಹುಲ್ ಹೇಳಿದ್ದು ಸುಳ್ಳು
ನವದೆಹಲಿ, 1 ಮೇ (ಹಿ.ಸ):ಆ್ಯಂಕರ್:ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠ
ಶ್ರೀರಾಮ ಲಲ್ಲಾ ಸಮಾರಂಭಕ್ಕೆ ರಾಷ್ಟ್ರಪತಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂದು ರಾಹುಲ್‌ ಹೇಳಿದ್ದು ಸುಳ್ಳು


ನವದೆಹಲಿ, 1 ಮೇ (ಹಿ.ಸ):ಆ್ಯಂಕರ್:ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪವನ್ನು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರಾಕರಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಟ್ರಸ್್ಟ , ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತಮ್ಮ ಭಾಷಣ ದಲ್ಲಿ, ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದಲ್ಲಿ ಶ್ರೀ ರಾಮಲಲ್ಲಾ ಅವರ ಪ್ರಾಣಪ್ರತಿಷ್ಠಾ ಸಮಾರಂಭಕ್ಕೆ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಡಕಟ್ಟು ಮೂಲದ ಕಾರಣಕ್ಕಾಗಿ ಆಹ್ವಾನಿಸಲಾಗಿಲ್ಲ ಎಂದು ಹೇಳಿದ್ದರು. ಅವರ ಈ ಹೇಳಿಕೆ ಸಂಪೂರ್ಣ ಸುಳ್ಳು, ಆಧಾರರಹಿತ ಮತ್ತು ದಾರಿತಪ್ಪಿಸುವಂತಿದೆ ಎಂದು ಆಕ್ಷೇಪಿಸಿದರು.

ಅಯೋಧ್ಯೆಯಲ್ಲಿ ನಡೆದ ಶುಭ ಸಮಾರಂಭಕ್ಕೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಮಾಜಿ ರಾಷ್ಟ್ರಪತಿ ಶ್ರೀರಾಮ್ ನಾಥ್ ಕೋವಿಂದ್ ಅವರನ್ನು ಆಹ್ವಾನಿಸಲಾಗಿತ್ತು ಎಂಬುದನ್ನು ರಾಹುಲ್ ಗಾಂಧಿ ಗಮನಕ್ಕೆ ತರಲು ಬಯಸುತ್ತೇವೆ.

ಭಾರತದ ಪ್ರಗತಿಗೆ ಕೊಡುಗೆ ನೀಡಿದ ವಿವಿಧ ಕ್ಷೇತ್ರಗಳ ಸಂತರು, ಕುಟುಂಬಗಳು ಮತ್ತು ಗಣ್ಯರು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದವರನ್ನು ಆಹ್ವಾನಿಸಲಾಯಿತು ಎಂದು ಗೊಂದಲಗಳಿಗೆ ತೆರೆ ಎಳೆದಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande