ಶಿವಮೊಗ್ಗ, ರಾಯಚೂರಿಗೆ ರಾಹುಲ್ ಗಾಂಧಿ: ಕಾಂಗ್ರೆಸ್ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ
ಬೆಂಗಳೂರು, 2 ಮೇ (ಹಿ.ಸ):ಆ್ಯಂಕರ್: ಶಿವಮೊಗ್ಗ ಲೋಕಸಭಾ ಕ್ಷೇತ್ರ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವ
-congress-leader-rahul-gandhi-visit-to-karnat


ಬೆಂಗಳೂರು, 2 ಮೇ (ಹಿ.ಸ):ಆ್ಯಂಕರ್:

ಶಿವಮೊಗ್ಗ ಲೋಕಸಭಾ ಕ್ಷೇತ್ರ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಪರ ಪ್ರಚಾರಕ್ಕಾಗಿ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ಇಂದು ಮೇ 2 ಗುರುವಾರ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ .

ಶಿವಮೊಗ್ಗದ ಅಲ್ಲಮ ಪ್ರಭು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಇನ್ನಿತರ ಪ್ರಮುಖರು ಭಾಗವಹಿಸಲಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ರಾಹುಲ್ ಗಾಂಧಿ ಆಗಮಿಸುವರು.

ರಾಯಚೂರಿನಲ್ಲಿ ಪ್ರಚಾರ ಸಭೆ: ರಾಹುಲ್ ಗಾಂಧಿ ಭಾಗಿ

ಲೋಕಸಭೆ ಚುನಾವಣೆ ನಿಮಿತ್ತ ಗುರುವಾರ ಮೇ 2 ರಂದು ರಾಯಚೂರು ನಗರದ ವಾಲ್ಕಟ್ ಮೈದಾನದಲ್ಲಿ ಜಿಲ್ಲಾ ಕಾಂಗ್ರೆಸ್ನಿಂದ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿದೆ

ಹಿಂದೂಸ್ತಾನ್ ಸಮಾಚಾರ್


 rajesh pande