ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಗಿಲ್ಲ ಬಿಜೆಪಿ ಟಿಕೆಟ್
ನವದೆಹಲಿ, 2 ಮೇ (ಹಿ.ಸ):ಆ್ಯಂಕರ್:ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ
Brij Bhushan, Accused Of Sex Harassmen


ನವದೆಹಲಿ, 2 ಮೇ (ಹಿ.ಸ):ಆ್ಯಂಕರ್:ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಟಿಕೆಟ್ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಗೃಹ ಸಚಿವ ಅಮಿತ್ ಶಾ ಲಕ್ನೋ ಪ್ರವಾಸದಲ್ಲಿದ್ದು ಈ ವಿಚಾರದ ಕುರಿತು ಬ್ರಿಜ್ ಭೂಷಣ್ ಅವರ ಬಳಿ ಚರ್ಚಿಸಲಿದ್ದು ಬ್ರಿಜ್ ಭೂಷಣ್ ಒಪ್ಪಿದರೆ ಅವರ ಕುಟುಂಬದಲ್ಲಿ ಯಾರಿಗಾದರೂ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸಂಸದ ಮತ್ತು ಮಾಜಿ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ನೀಡಿ ತೊಂದರೆಗೆ ಸಿಲುಕಿದ್ದರು. ಕೇಸರ್ ಗಂಜ್ ಕ್ಷೇತ್ರದಿಂದ ಅವರಿಗೆ ಲೋಕಸಭೆ ಚುನಾವಣೆಗೆ ಪಕ್ಷ ಟಿಕೆಟ್ ನೀಡದಿರುವ ಬಗ್ಗೆ ಮೊದಲಿನಿಂದಲೂ ಊಹಾಪೋಹ ಇತ್ತು.

ಇದೀಗ ಮೂಲಗಳು ಇದನ್ನು ಖಚಿತಪಡಿಸುತ್ತಿದ್ದು, ಪಕ್ಷದಿಂದ ಅವರಿಗೆ ಟಿಕೆಟ್ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗುತ್ತಿದೆ. ಮತ್ತೊಂದೆಡೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಪಾಳಯದಲ್ಲಿ ಸಂಸದರ ಕಿರಿಯ ಪುತ್ರ ಹಾಗೂ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಅಧ್ಯಕ್ಷ ಕರಣ್ ಭೂಷಣ್ ಶರಣ್ ಸಿಂಗ್ ಹೆಸರು ಚರ್ಚೆಯಲ್ಲಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande