ಅಭಿವೃದ್ಧಿ ಸಂಪೂರ್ಣ ಸ್ಥಗಿತ: ಬಿಎಸ್ವೈ ಆರೋಪ
ಕುರುಗೋಡು, 02 ಮೇ (ಹಿ.ಸ): ಆ್ಯಂಕರ್ : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ
ಕರ್ನಾಟಕದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ: ಬಿಎಸ್ವೈ ಆರೋಪ


ಕರ್ನಾಟಕದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ: ಬಿಎಸ್ವೈ ಆರೋಪ


ಕರ್ನಾಟಕದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ: ಬಿಎಸ್ವೈ ಆರೋಪ


ಕರ್ನಾಟಕದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ: ಬಿಎಸ್ವೈ ಆರೋಪ


ಕುರುಗೋಡು, 02 ಮೇ (ಹಿ.ಸ):

ಆ್ಯಂಕರ್ : ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ಸಂಪೂರ್ಣ ವಿಫಲವಾಗಿದ್ದು, ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆರೋಪಿಸಿದ್ದಾರೆ.

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಶ್ರೀರಾಮುಲು ಪರ ಕುರುಗೋಡು ಪಟ್ಟಣದಲ್ಲಿ ಗುರುವಾರ ನಡೆದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕದಲ್ಲಿ ಸರ್ಕಾರ ಆರ್ಥಿಕ ದಿವಾಳಿ ಹಂತಕ್ಕೆ ತಲುಪಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂಭತ್ತು ತಿಂಗಳಾದರೂ ಯಾವುದೇ ಅಬಿವೃದ್ಧಿ ಕಾಣುತ್ತಿಲ್ಲ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾರಣ ರಾಜ್ಯದ ವಿವಿಧ ಭಾಗಗಳಲ್ಲಿ ಅಮಾಯಕರು ವಿನಾಕಾರಣ

ಕೊಲೆ- ಸುಲಿಗೆ, ಅತ್ಯಾಚಾರ, ದೌರ್ಜನ್ಯಗಳಿಗೆ ಬಲಿಯಾಗುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದ್ದ ರಾಹುಲ್ಗಾಂಧಿಯ ಮಾತನ್ನೇ ಈ ಸರ್ಕಾರ ಪಾಲನೆ ಮಾಡುತ್ತಿಲ್ಲ ಎಂದರು.

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಅವರು, ರೈತರ ಹಿತದೃಷ್ಟಿಯಿಂದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ನವಲಿ ಬಳಿ ತುಂಗಭದ್ರಾ ಜಲಾಶಯಕ್ಕೆ ಜಲಾಶಯ ನಿರ್ಮಿಸಲು ಬಜೆಟ್ನಲ್ಲಿ 100 ಕೋಟಿ ಮೀಸಲಿಡಲಾಗಿದೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಕಂಪ್ಲಿ ಮತ್ತು ಕುರುಗೋಡು ಪಟ್ಟಣಗಳನ್ನು ತಾಲ್ಲೂಕು ಕೇಂದ್ರಗಳಾಗಿ ಘೋಷಣೆ ಮಾಡಲಾಗಿದೆ. ಈಗಿನ ಕಾಂಗ್ರೆಸ್ ಸರ್ಕಾರ ಎರಡೂ ತಾಲ್ಲೂಕುಗಳಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದರು.

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ. ಕಂಪ್ಲಿಯಲ್ಲಿ ಸಕ್ಕರೆ ಕಾರ್ಖಾನೆ ಪುನರ್ ಪ್ರಾರಂಭಿಸುವುದು ಅಷ್ಟೇ ಸತ್ಯ ಎಂದರು.

ವಿಧಾನ ಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು, ಉತ್ತಮ ಆಡಳಿತಕ್ಕಾಗಿ - ದೇಶದ ರಕ್ಷಣೆಗಾಗಿ ನರೇಂದ್ರ ಮೋದಿ ಅವರ ಬಲಪಡಿಸಲಿಕ್ಕಾಗಿ ನಮ್ಮ ಅಭ್ಯರ್ಥಿ ಬಿ. ಶ್ರೀರಾಮುಲು ಅವರಿಗೆ ಮತ ನೀಡಿರಿ. ಈ ಮೂಲಕ ಕರ್ನಾಟಕದಲ್ಲಿ ಬಿ.ವೈ. ವಿಜಯೇಂದ್ರ ಅವರ ಬಲವನ್ನೂ ಹೆಚ್ಷಿಸಿದಂತಾಗುತ್ತದೆ ಎಂದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಅನೀಲ್ ಕುಮಾರ್ ಮೋಕಾ, ಎ.ತಿಮ್ಮಾರೆಡ್ಡಿ, ಅಳ್ಳಳ್ಳಿ ವೀರೇಶ್, ಮದಿರೆ ಕುಮಾರಸ್ವಾಮಿ, ಜೆ.ಸೋಮಶೇಖರ ಗೌಡ, ಕೆ.ಎಂ. ಮಹೇಶ್ವರ ಸ್ವಾಮಿ, ನಟರಾಜ, ಯೋಗೀಶ್, ಎನ್. ಕೊಮಾರೆಪ್ಪ, ಅಂದ್ರಾಳ್ ಮಲ್ಲಿಕಾರ್ಜುನ, ಸುನೀಲ್, ವಿಜಯ್ ರೆಡ್ಡಿ, ನರಸಪ್ಪ ಯಾದವ್, ಕೆ.ವಿರೂಪಾಕ್ಷಿ ಮತ್ತು ಡಿಶ್ ರಾಜಾ ಇದ್ದರು.


 rajesh pande