ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಪ್ರಕ್ರಿಯೆ ಆರಂಭ
ನವದೆಹಲಿ, 2 ಮೇ (ಹಿ.ಸ):ಆ್ಯಂಕರ್:೨೦೨೫ನೇ ಸಾಲಿನ ಪದ್ಮ ಪ್ರಶಸ್ತಿಗಳಿಗಾಗಿ ಆನ್ ಲೈನ್ ನಾಮನಿರ್ದೇಶನಗಳು ಮತ್
ominations: Nominations For Indi


ನವದೆಹಲಿ, 2 ಮೇ (ಹಿ.ಸ):ಆ್ಯಂಕರ್:೨೦೨೫ನೇ ಸಾಲಿನ ಪದ್ಮ ಪ್ರಶಸ್ತಿಗಳಿಗಾಗಿ ಆನ್ ಲೈನ್ ನಾಮನಿರ್ದೇಶನಗಳು ಮತ್ತು ಶಿಫಾರಸುಗಳು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ ೧೫ ಕೊನೆಯ ದಿನವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್ ನಲ್ಲಿ ಆನ್ಲೈನ್ ನಲ್ಲಿ ಸ್ವೀಕರಿಸಲಾಗುತ್ತದೆ. ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಸೇರಿವೆ. ೧೯೫೪ ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಈ ಪ್ರಶಸ್ತಿಗಳು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು ಮತ್ತು ಸೇವೆಗಾಗಿ ನೀಡಲಾಗುತ್ತದೆ. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ, ಸಾರ್ವಜನಿಕ ಸೇವಾ ವಲಯದಲ್ಲಿ ಕಾರ್ಯ ನಿರ್ವಹಿಸುವವರು, ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ. ಪದ್ಮ ಪ್ರಶಸ್ತಿಗಳನ್ನು ಜನರ ಪದ್ಮವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande