ತಂಬಾಕು ಸೇವನೆಯಿಂದ ದೂರ ಇರಲು ವಿದ್ಯಾರ್ಥಿಗಳಿಗೆ ಕರೆ
ಕೋಲಾರ, ೦೪ ಮೇ (ಹಿ.ಸ) : ಆ್ಯಂಕರ್ : ಮನುಷ್ಯನ ಜೀವನದಲ್ಲಿ ಇಂದು ಆಹಾರ,ನೀರಿನಷ್ಟೇ ಕಾನೂನು ಅತಿ ಮುಖ್ಯವಾಗಿದೆ. ದೈನಂದ
ಕೋಲಾರದ ಚೈತನ್ಯ ಇನ್ಸಿಟ್ಯೂಟ್ ಆಪ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ ಮಾತನಾಡಿದರು.


ಕೋಲಾರ, ೦೪ ಮೇ (ಹಿ.ಸ) :

ಆ್ಯಂಕರ್ : ಮನುಷ್ಯನ ಜೀವನದಲ್ಲಿ ಇಂದು ಆಹಾರ,ನೀರಿನಷ್ಟೇ ಕಾನೂನು ಅತಿ ಮುಖ್ಯವಾಗಿದೆ. ದೈನಂದಿನ ಬದುಕಿಗೆ ಅಗತ್ಯವಾದ ಕನಿಷ್ಟ ಕಾನೂನುಗಳ ಅರಿವು ಪಡೆಯಿರಿ. ಮಾದಕ ವಸ್ತುಗಳ ಸೇವನೆಗೆ ತುತ್ತಾಗದೇ ಅಪರಾಧ ಮುಕ್ತ ಜೀವನ ನಡೆಸಿ ಎಂದು ವಿದ್ಯಾರ್ಥಿಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ ಕರೆ ನೀಡಿದರು.

ನಗರದ ಚೈತನ್ಯ ಇನ್ಸಿಟ್ಯೂಟ್ ಆಪ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಮಾಜಕ್ಕೆ ಹಾಗೂ ಯುವಪೀಳಿಗೆಗೆ ಕಂಟಕವಾಗಿರುವ ಮಾದಕ ವ್ಯಸನದಿಂದ ದೂರ ಮಾಡಲು ವಿದ್ಯಾರ್ಥಿಗಳಿಗೆ ಅರಿವು ನೀಡುವ ಕೆಲಸ ಮಾಡುತ್ತಿದ್ದು, ಕಾಲೇಜಿನ ಆವರಣದಲ್ಲಿ ಅಥವಾ ಎಲ್ಲೇ ಆಗಲಿ ಮಾದಕ ವಸ್ತುಗಳ ಸಾಗಾಣೆ, ಮಾರಾಟ ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ ಎಂದು ತಿಳಿಸಿದರು.

ತಂಬಾಕು,ಮಾದಕ ವಸ್ತು ನಿಯಂತ್ರಣಕ್ಕೆ ಕೋಟ್ಟಾ ಸಿಗರೇಟು ಹಾಗೂ ಇತರೆ ತಂಬಾಕು ಉತ್ಪನ್ನಗಳ ಕಾಯಿದೆ ಜಾರಿಯಲ್ಲಿದ್ದು, ೧೮ ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದ ಅಪರಾಧವಾಗಿದೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದರು.

ಶಾಲಾ ಕಾಲೇಜುಗಳಿಂದ ೨೦೦ ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಸದರಿ ಕಾಯಿದೆಯಡಿ ನಿಷೇಧಿಸಲಾಗಿದ್ದು, ಪ್ರತಿ ಶಾಲೆ,ಕಾಲೇಜು ಬಳಿ ನಿಷೇಧದ ಕುರಿತು ನಾಮಫಲಕ ಹಾಕುವುದು ಕಡ್ಡಾಯವಾಗಿದೆ ಎಂದರು.

ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದ ಅವರು, ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ ವಿವಾದ ರಹಿತ ಜೀವನ ನಡೆಸಬಹುದು ಎಂದರು.

ಬಾಲ್ಯವಿವಾಹ ಸಮಾಜಕ್ಕೆ ಕಂಟಕವಾಗಿದೆ ಎಂದ ಅವರು ಇದರ ಸಂಪೂರ್ಣ ತಡೆಗೆ ವಿದ್ಯಾರ್ಥಿ ಸಯುದಾಯದ ಸಹಕಾರ ಅಗತ್ಯವಿದೆ, ನಿಮ್ಮ ಸುತ್ತಮುತ್ತ ಬಾಲ್ಯವಿವಾಹ ಆಗುತ್ತಿದ್ದರೆ ನೀವು ಕೂಡಲೇ ೧೦೯೮ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬಹುದು, ನಿಮ್ಮ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದರು.

ಭ್ರೂಣ ಲಿಂಗ ಪತ್ತೆ ಮಾಡುವುದು ಸಹಾ ಅಪರಾಧವಾಗಿದ್ದು,ಕಠಿಣ ಶಿಕ್ಷೆ ಇದೆ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೂ ಸರ್ಕಾರ ಕಾನೂನು ಮಾಡಿದ್ದು, ಇದರ ಕುರಿತು ನೀವು ಅರಿತು ಸಮಾಜಕ್ಕೂ ತಿಳಿಸಿಕೊಡಿ ಎಂದರು.

ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿಯ ಕುರಿತು ಅರಿವು ನೀಡಿದ್ದು, ಲಿಂಗ ಪತ್ತೆ ನಿಷೇಧ ಕಾಯಿದೆ, ಬಾಲ್ಯವಿವಾಹ ನಿಷೇಧ, ಹೆಣ್ಣು ಭ್ರೂಣ ಹತ್ಯೆ ಕಾಯಿದೆ, ಬಾಲಕಾರ್ಮಿಕ ನಿಷೇಧ, ಹಾಗೂ ಮೋಟಾರ್ ವಾಹನ ಕಾಯಿದೆಗಳ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ರಾಷ್ಟಿçಯ ತಂಬಾಕು ನಿಯಂತ್ರಣ ಘಟಕದ ನೋಡಲ್ ಅಧಿಕಾರಿ ಡಾ.ಎಂ.ಎ.ಚಾರಣಿ ಮಾತನಾಡಿ, ನೀವು ದುಶ್ಚಟಗಳಿಂದ ದೂರವಿರಿ, ಮಾದಕ,ತಂಬಾಕು ವಸ್ತುಗಳ ಸೇವನೆ ಮಾಡದಿರಿ, ಜೀವಕ್ಕೆ ಮಾತ್ರವಲ್ಲ, ನಿಮ್ಮನ್ನು ಅಪರಾಧಕ್ಕೆ ಈ ವಸ್ತುಗಳು ಪ್ರೇರೇಪಿಸುತ್ತವೆ ಎಂದು ಎಚ್ಚರಿಸಿದರು.

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಮಾರಕವಾಗಿ ಪರಿಣಮಿಸುತ್ತಿದೆ, ಕ್ಯಾನ್ಸರ್ ಧೂಮಪಾನ, ತಂಬಾಕು ಸೇವನೆಯಿಂದಲೇ ಅತಿ ಹೆಚ್ಚು ಹರಡುತ್ತಿದೆ ಎಂಬುದನ್ನು ಅರಿತು ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳನ್ನು ಸೇವಿಸದಿರಿ, ನಿಮ್ಮ ಶೈಕ್ಷಣಿಕ ಬದುಕಿನಲ್ಲಿ ಅಂತಹ ತಪ್ಪು ಮಾಡದಿರಿ ಮತ್ತು ಇತರರಿಗೂ ಅರಿವು ಮೂಡಿಸಿ ಎಂದು ಸಲಹೆ ನೀಡಿದರು.

ಕಾಯ್ಕçಮದಲ್ಲಿ ಎನ್ಎಎಲ್ಎಸ್ಎ ಸಹಾಯವಾಣಿ ೧೫೧೦೦ ಕುರಿತು ಮಾಹಿತಿ ನೀಡಲಾಯಿತು, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಮಾಲೋಚಕ ಪಿ.ಮಹಮದ್, ಚೈತನ್ಯ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲ ಮಹಮದ್ ಶೋಯಬ್, ಚೈತನ್ಯ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ, ಚೈತನ್ಯ ಇನ್ಸಿಟ್ಯೂಟ್ ಸಂಸ್ಥಾಪಕ ಸುಬ್ರಮಣಿ ಭಾಗವಹಿಸಿದ್ದರು.

ಚಿತ್ರ; ಕೋಲಾರದ ಚೈತನ್ಯ ಇನ್ಸಿಟ್ಯೂಟ್ ಆಪ್ ಮ್ಯಾನೇಜ್ಮೆಂಟ್ ಅಂಡ್ ಸೈನ್ಸ್ ಕಾಲೇಜಿನಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್.ಹೊಸಮನಿ ಮಾತನಾಡಿದರು.


 rajesh pande