ಚಿನ್ನಸ್ವಾಮಿ ಅಂಗಳದಲ್ಲಿಂದು ಆರ್ ಸಿ ಬಿ ಗೆ ಗುಜರಾತ್ ಟೈಟಾನ್ಸ್ ಸವಾಲು
ಬೆಂಗಳೂರು, 4 ಮೇ (ಹಿ.ಸ):ಆ್ಯಂಕರ್ : ಐಪಿಎಲ್ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಆರ್ ಸಿ ಬಿ ಮುಂದಿನ ತನ್
cb-vs-gt-match-at-chinnaswamy-stadium/


ಬೆಂಗಳೂರು, 4 ಮೇ (ಹಿ.ಸ):ಆ್ಯಂಕರ್ :

ಐಪಿಎಲ್ ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಲ್ಲಿರುವ ಆರ್ ಸಿ ಬಿ ಮುಂದಿನ ತನ್ನೆಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು (ಏ.4) ತವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಎದುರು ಸೆಣಸಲು ಸಜ್ಜಾಗಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.

2024ರ ಐಪಿಎಲ್ ಟೂರ್ನಿಯಲ್ಲಿ ಅಸ್ಥಿರ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ 2 ಪಂದ್ಯಗಳಲ್ಲಿ ಭರ್ಜರಿ ಜಯ ದಾಖಲಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಅದರಲ್ಲೂ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಎದುರು 9 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತ್ತು. ಇದೀಗ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂಥದ್ದೇ ಪ್ರದರ್ಶನ ನೀಡಿ ನಾಕ್ಔಟ್ ಹಂತಕ್ಕೆ ಮತ್ತಷ್ಟು ಹತ್ತಿರವಾಗಲು ಆರ್ಸಿಬಿ ಎದುರು ನೋಡುತ್ತಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande