ಲೋಕಸಭಾ ಚುನಾವಣೆಯ ಮೂರನೇ ಹಂತದ ಬಹಿರಂಗ ಪ್ರಚಾರ; ಇಂದು ಸಂಜೆ ತೆರೆ
ನವದೆಹಲಿ, 5 ಮೇ (ಹಿ.ಸ):ಆ್ಯಂಕರ್:ಲೋಕಸಭಾ ಚುನಾವಣೆಯ ಮೂರನೇ ಹಂತದ ಬಹಿರಂಗ ಪ್ರಚಾರ ಇಂದು ಸಂಜೆ ತೆರೆ ಬೀಳಲಿದೆ
Congress-jds-bjp,Karnataka Elections


ನವದೆಹಲಿ, 5 ಮೇ (ಹಿ.ಸ):ಆ್ಯಂಕರ್:ಲೋಕಸಭಾ ಚುನಾವಣೆಯ ಮೂರನೇ ಹಂತದ ಬಹಿರಂಗ ಪ್ರಚಾರ ಇಂದು ಸಂಜೆ ತೆರೆ ಬೀಳಲಿದೆ. ಹೀಗಾಗಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬೆಂಬಲವನ್ನು ಗಳಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಹಂತದಲ್ಲಿ ೧೦ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಗರ್ ಹವೇಲಿ ಹಾಗೂ ದಮನ್ ಮತ್ತು ದಿಯು ಸೇರಿದಂತೆ ೯೩ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಸಿದ್ಧತೆ ಅಂತಿಮ ಹಂತವನ್ನು ತಲುಪಿದೆ. ರಾಜ್ಯದ ಹತ್ತು ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿದೆ. ಸಂಭಾಲ್, ಹತ್ರಾಸ್, ಆಗ್ರಾ, ಫತೇಪುರ್ ಸಿಕ್ರಿ, ಫಿರೋಜಾಬಾದ್, ಮೈನ್ಪುರಿ, ಇಟಾ, ಬದೌನ್, ಅಯೋನ್ಲಾ ಮತ್ತು ಬರೇಲಿ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande