ಮತದಾನದ ದಿನದಂದು ವೇತನ ಸಹಿತ ರಜೆ ನೀಡುವಂತೆ ಡಿ.ಸಿ ಆದೇಶ
ರಾಯಚೂರು,, 5 ಮೇ (ಹಿ.ಸ): ಆ್ಯಂಕರ್: ಮೇ.7ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತದಾನ ನಡೆಯುವ ಹಿನ್ನ
ಮತದಾನದ ದಿನದಂದು ವೇತನ ಸಹಿತ ರಜೆ ನೀಡುವಂತೆ ಡಿ.ಸಿ ಆದೇಶ


ರಾಯಚೂರು,, 5 ಮೇ (ಹಿ.ಸ):

ಆ್ಯಂಕರ್: ಮೇ.7ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತದಾನ ನಡೆಯುವ ಹಿನ್ನಲೆಯಲ್ಲಿ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ(ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ)ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಮೇ.7ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಹಾಗೂ ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕಾರ್ಯ ನಿರ್ವಹಿಸುವ ನೌಕರರಿಗೆ ಮತದಾನ ಮಾಡಲು ಒಳಪಟ್ಟು ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಮೇ.7ರಂದು ವೇತನ ಸಹಿತ ರಜೆ ನೀಡುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ನಿರ್ದೇಶಿಸಿದ್ದಾರೆ.

ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯಿಸುವುದಿಲ್ಲ ಅದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡತಕ್ಕದ್ದು ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗುವಂತೆ ಅವರು ತಿಳಿಸಿದ್ದಾರೆ.


 rajesh pande