ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ
ಬೆಂಗಳೂರು, 5 ಮೇ (ಹಿ.ಸ):ಆ್ಯಂಕರ್:ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು
Karnataka Weather Forecast:IMD Says Amid Light Rain, 


ಬೆಂಗಳೂರು, 5 ಮೇ (ಹಿ.ಸ):ಆ್ಯಂಕರ್:ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಹೊಸಕೋಟೆ, ಮೈಸೂರು, ಹುಣಸೂರು,ಮಂಡ್ಯ, ಸರಗೂರು,ಹಾರಂಗಿ, ಕುಶಾಲನಗರ, ಕೆಆರ್ನಗರದಲ್ಲಿ ಮಳೆಯಾಗಿದೆ. ಕಲಬುರಗಿ ಹಾಗೂ ರಾಯಚೂರಿನಲ್ಲಿ 44.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಎಚ್ಎಎಲ್ನಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande