ನಾಳೆ ನಾನಾ ಕಡೆ ಮಸ್ಟರಿಂಗ್ ಕಾರ್ಯ
ಹೊಸಪೇಟೆ, 5 ಮೇ (ಹಿ.ಸ): ಆ್ಯಂಕರ್: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಮೇ 7ರಂದು ಮತದಾನ
ನಾಳೆ ನಾನಾ ಕಡೆ ಮಸ್ಟರಿಂಗ್ ಕಾರ್ಯ


ಹೊಸಪೇಟೆ, 5 ಮೇ (ಹಿ.ಸ):

ಆ್ಯಂಕರ್: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ನಾಳೆ ನಾನಾ ಕಡೆ ಮಸ್ಟರಿಂಗ್ ಕಾರ್ಯ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ತಿಳಿಸಿದ್ದಾರೆ.

ಮಸ್ಟರಿಂಗ್ ಡಿಮಸ್ಟರಿಂಗ್ ಕೇಂದ್ರಗಳ ವಿವರ: ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಆರ್ಎಂಪಿಪಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಹೊಸಪೇಟೆ ನಗರದ ಸಂಡೂರ ರಸ್ತೆಯಲ್ಲಿರುವ ಎಲ್ಎಫ್ಎಸ್ ಶಾಲೆಯಲ್ಲಿ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಯುನಿಟೆಡ್ ಪದವಿ ಪೂರ್ವ ಕಾಲೇಜಿನಲ್ಲಿ, ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಗರಿಬೊಮ್ಮನಹಳ್ಳಿ ಪಟ್ಟಣದ ರಾಮನಗರದಲ್ಲಿನ ಜಿವಿಪಿಪಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಶ್ರೀ ತರಳಬಾಳು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕಾರ್ಯ ನಡೆಯಲಿದೆ.

ಮತಗಟ್ಟೆ ಅಧಿಕಾರಿ ಸಿಬ್ಬಂದಿಗೆ ಅಗತ್ಯ ವ್ಯವಸ್ಥೆ: ಮತದಾನ ಕೇಂದ್ರಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಯು ನಾಳೆ ವಿವಿಧೆಡೆಯಲ್ಲಿನ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಮತಗಟ್ಟೆಗಳಿಗೆ ನಿಯೋಜನೆಗಳೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಮಸ್ಟರಿಂಗ್ ಕೇಂದ್ರಗಳಲ್ಲಿ ಹೆಲ್ತ್ ಶೆಲ್ಟರ್ಗಳನ್ನು ಸ್ಥಾಪಿಸಲಾಗಿದೆ. ಪ್ರತಿಯೊಂದು ಮತಗಟ್ಟೆಗೆ ಹೆಲ್ತ್ ಕಿಟ್ ಸರಬರಾಜು ಮಾಡಲಾಗಿದೆ. ಮಸ್ಟರಿಂಗ್ ಕೇಂದ್ರಗಳಲ್ಲಿ ಮೇ 6ರಂದು ಮತಗಟ್ಟೆಗಳಿಗೆ ನಿಯೋಜನೆಗೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹಾಗೂ ಪೊಲೀಸ್ ಸಿಬ್ಬಂದಿಗೆ ಊಟ ಉಪಹಾರದ ವ್ಯವಸ್ಥೆ ಮಾಡಲಾಗಿದೆ.

ಸಾರಿಗೆ ವ್ಯವಸ್ಥೆ: ಹಡಗಲಿ ಕ್ಷೇತ್ರದಲ್ಲಿ 39, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ 52, ವಿಜಯನಗರ ಕ್ಷೇತ್ರದಲ್ಲಿ 57, ಕೂಡ್ಲಿಗಿ ಕ್ಷೇತ್ರದಲ್ಲಿ 52 ಮತ್ತು ಹರಪನಹಳ್ಳಿ ಕ್ಷೇತ್ರದಲ್ಲಿ 52 ಸೇರಿ ಒಟ್ಟು 1234 ಮತಗಟ್ಟೆಗಳಿಗೆ 252 ರೂಟಗಳ ಮೂಲಕ ನಿಯೋಜಿಸಿದ ಸಿಬ್ಬಂದಿಗೆ ಮತಗಟ್ಟೆ ಕೇಂದ್ರಗಳಿಗೆ ತೆರಳಲು ಸಾರಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.


 rajesh pande