ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರೀ ಅನಾಹುತ
ಬೆಂಗಳೂರು , 5 ಮೇ (ಹಿ.ಸ):ಆ್ಯಂಕರ್: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಎಲೆಕ್


ebrbrಬೆಂಗಳೂರು , 5 ಮೇ (ಹಿ.ಸ):ಆ್ಯಂಕರ್: ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮಂಗಳೂರಿನಿಂದ ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್ ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೆದ್ದಾರಿಯಲ್ಲಿದ್ದ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಟ್ಯಾಂಕರ್ ಮಗುಚಿ ಬೀಳುತ್ತಿದ್ದಂತೆ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಸೋರಿಕೆಯಾಗಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಕ್ರೇನ್ ಬಳಸಿ ಟ್ಯಾಂಕರ್ ಟ್ಯಾಂಕರ್ ಅನ್ನು ಕ್ರೇನ್ ಮೂಲಕ ಮೇಲೆತ್ತಲಾಗಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande