ಈ ವಾರವೇ ಎಸ್ ಎಸ್ ಎಲ್ ಸಿ ಫಲಿತಾಂಶ
ಬೆಂಗಳೂರು, 6 ಮೇ (ಹಿ.ಸ):ಆ್ಯಂಕರ್:ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ನ
ಈ ವಾರವೇ ಎಸ್ ಎಸ್ ಎಲ್ ಸಿ ಫಲಿತಾಂಶ


ಬೆಂಗಳೂರು, 6 ಮೇ (ಹಿ.ಸ):ಆ್ಯಂಕರ್:ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಮೇ 9 ಅಥವಾ 10ರಂದು ಪ್ರಕಟವಾಗುವ ನಿರೀಕ್ಷೆ ಇದೆ. ಮಂಗಳವಾರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುವ ಕಾರಣ ಫಲಿತಾಂಶ ವಿಳಂಬವಾಗುತ್ತಿದೆ. ಆದಾಗ್ಯೂ, ಇದೇ ವಾರ ಪ್ರಕಟವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ, ಫಲಿತಾಂಶದ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಅಧಿಕೃತವಾಗಿ ಘೋಷಣೆ ಮಾಡಿಲ್ಲ.

ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಕೂಡ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ ಪ್ರಕಟಿಸಲಾಗುತ್ತದೆ.

ಸಿಬಿಎಸ್ಇ 10ನೇ ತರಗತಿಯ ಫಲಿತಾಂಶದ ಹೆಸರಿನಲ್ಲಿ ನಕಲಿ ಸಂದೇಶ ಭಾನುವಾರ ಹರಿದಾಡಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಫಾರ್ವರ್ಡ್ ಆದ ಇಂತಹ ಅಸಂಬದ್ಧ ಸಂದೇಶಗಳಲ್ಲಿ ಬಗ್ಗೆ ವಿದ್ಯಾರ್ಥಿಗಳು ಎಚ್ಚರದಿಂದ ಇರಬೇಕು. ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಿದರೆ ಮಾತ್ರವೇ ಪರಿಗಣಿಸಬೇಕು ಎಂದು ಇಲಾಖೆ ಸಲಹೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande