ಲೋಕಸಭೆ ಚುನಾವಣೆ: ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ನಾಳೆ ಮತದಾನ
ಬೆಂಗಳೂರು,, 6 ಮೇ (ಹಿ.ಸ):ಆ್ಯಂಕರ್: ಲೋಕಸಭೆ ಚುನಾವಣೆಯ ರಾಜ್ಯದ ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದ
Lok Sabha Election 2024 Karnataka Phase 2 V


ಬೆಂಗಳೂರು,, 6 ಮೇ (ಹಿ.ಸ):ಆ್ಯಂಕರ್: ಲೋಕಸಭೆ ಚುನಾವಣೆಯ ರಾಜ್ಯದ ಎರಡನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಹಿರಂಗ ಪ್ರಚಾರಕ್ಕೆ ಇಂದು (ಮೇ 5) ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಈ ಮೂಲಕ ಧ್ವನಿವರ್ಧಕಗಳು, ಮೈಕ್ ಗಳು, ಬ್ಯಾನರ್ಗಳು ಮತ್ತು ಮೆಗಾ ರ್ಯಾಲಿಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ. ಕೇವಲ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ.

ಉತ್ತರ ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇಂದು ಸಂಜೆ 6 ಗಂಟೆಯಿಂದ ಮತದಾನ ನಡೆಯುವ ಜಿಲ್ಲೆಗಳಲ್ಲಿ ರಾಜ್ಯದ ಗಡಿಗಳನ್ನು ಮುಚ್ಚಲಾಗುವುದು. ಚುನಾವಣೆ ಮುಗಿಯುವವರೆಗು ಮದ್ಯ ಮಾರಾಟಕ್ಕೆ ಅನುಮತಿ ಇಲ್ಲ. ಬೇರೆ ರಾಜ್ಯಗಳಿಂದಲೂ ಮದ್ಯ ತುರವಂತಿಲ್ಲ.

ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಉತ್ತರ ಕನ್ನಡ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳು ತೆಲಂಗಾಣ, ಆಂಧ್ರಪ್ರದೇಶ, ಗೋವಾ ಮತ್ತು ಮಹಾರಾಷ್ಟ್ರದೊಂದಿಗೆ ಗಡಿಯನ್ನು ಹಂಚಿಕೊಂಡಿವೆ. ಸಿಇಒ ಕಚೇರಿಯು ನೆರೆಯ ರಾಜ್ಯಗಳ ರಾಜ್ಯ ಸರ್ಕಾರಗಳಿಗೆ ಮತದಾನ ಮಾಡಲು ಅವಕಾಶ ನೀಡಲು ಎಲ್ಲ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ಮೇ 7 ರಂದು ವೇತನ ಸಹಿತ ರಜೆ ನೀಡುವಂತೆ ವಿನಂತಿಸಿದೆ.

ಹಿಂದೂಸ್ತಾನ್ ಸಮಾಚಾರ್


 rajesh pande