ಫೋಟೋಗ್ರಾಫಿ, ವಿಡಿಯೋಗ್ರಾಫಿ ತರಬೇತಿ: ಅರ್ಜಿ ಆಹ್ವಾನ
ಬಳ್ಳಾರಿ, 06 ಮೇ (ಹಿ.ಸ): ಆ್ಯಂಕರ್ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಬಿ ಆರ್ಎಸ್ಇಟಿಐ) ವತಿ
ಫೋಟೋಗ್ರಾಫಿ, ವಿಡಿಯೋಗ್ರಾಫಿ ತರಬೇತಿ: ಅರ್ಜಿ ಆಹ್ವಾನ


ಬಳ್ಳಾರಿ, 06 ಮೇ (ಹಿ.ಸ):

ಆ್ಯಂಕರ್ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಬಿ ಆರ್ಎಸ್ಇಟಿಐ) ವತಿಯಿಂದ ನಗರ ಹಾಗೂ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕರಿಗೆ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿ ನೀಡಲಾಗುತ್ತದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ(ಸಿಬಿ ಆರ್ಎಸ್ಇಟಿಐ)ಯ ನಿರ್ದೇಶಕರು ತಿಳಿಸಿದ್ದಾರೆ.

ಜೂನ್ 5 ರಿಂದ 30 ದಿನಗಳ ಕಾಲ ತರಬೇತಿ ಅವಧಿಯಾಗಿದ್ದು, ತರಬೇತಿ ಅವಧಿಯಲ್ಲಿ ಊಟ ವಸತಿ ಉಚಿತವಾಗಿರುತ್ತದೆ.

*ಅರ್ಹತೆಗಳು:*

20 ರಿಂದ 45 ವಯೋಮಿತಿ ಒಳಗಿರಬೇಕು. ಬಿಪಿಎಲ್ ಕಾರ್ಡ್ ಹೊಂದಿರಬೇಕು. ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕ್ಷೇತ್ರದ ಪ್ರಾಥಮಿಕ ಜ್ಞಾನ ಹೊಂದಿರಬೇಕು. ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು, ಬರೆಯಲು ಬರಬೇಕು.

ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿಯಲ್ಲಿ ಅನುಭವ ಹೊಂದಿದವರಿಗೆ ಪ್ರಥಮ ಆದ್ಯತೆ ನೀಡಲಾಗುವುದು. 30 ಜನರಿಗೆ ಅವಕಾಶ ಇರುತ್ತದೆ.

ತರಬೇತಿ ಪಡೆಯಲು ಆಸಕ್ತಿಯುಳ್ಳವರು ಮೇ 27ರ ಒಳಗಾಗಿ ಆಫ್ಲೈನ್ ಮೂಲಕ ನಗರದ ಹೊಸಪೇಟೆ ರಸ್ತೆಯ ಡಿ.ಐ.ಸಿ ಕಾಂಪೌಂಡ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ಹತ್ತಿರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಬಿ ಆರ್ಎಸ್ಇಟಿಐ)ಯ ನಿರ್ದೇಶಕರ ಕಚೇರಿ ಗೆ ಅಭ್ಯರ್ಥಿಯ ಸ್ವ ವಿವರದೊಗಿಗೆ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂ.08392299117 ಅಥವಾ ಮೊ.9449860659 ಗೆ ಸಂಪರ್ಕಿಸಬಹುದಾಗಿದೆ.


 rajesh pande