ಮಸ್ಟರಿಂಗ್ ಕಾರ್ಯ ಯಶಸ್ವಿ, ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ಕೊಪ್ಪಳ, 06 ಮೇ (ಹಿ.ಸ): ಆ್ಯಂಕರ್ : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಮೇ 07 ರಂದು ಮತದಾನ ಜರುಗಲ
   ಮಸ್ಟರಿಂಗ್ ಕಾರ್ಯ ಯಶಸ್ವಿ, ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ


   ಮಸ್ಟರಿಂಗ್ ಕಾರ್ಯ ಯಶಸ್ವಿ, ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ


   ಮಸ್ಟರಿಂಗ್ ಕಾರ್ಯ ಯಶಸ್ವಿ, ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ


ಕೊಪ್ಪಳ, 06 ಮೇ (ಹಿ.ಸ):

ಆ್ಯಂಕರ್ : ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಮೇ 07 ರಂದು ಮತದಾನ ಜರುಗಲಿದ್ದು, ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಸೋಮವಾರ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಿತು.

ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳ ಭೇಟಿ: ಕುಷ್ಟಗಿ, ಕನಕಗಿರಿ, ಕೊಪ್ಪಳ ಮತ್ತು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ಭೇಟಿ ನೀಡಿ, ಮಸ್ಟರಿಂಗ್ ಕಾರ್ಯವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಇನ್ನಿತರರು ಇದ್ದರು.

ವಿವಿಧೆಡೆ ಮಸ್ಟರಿಂಗ್ ಕಾರ್ಯ: 60-ಕುಷ್ಟಗಿ, 61-ಕನಕಗಿರಿ, 62- ಗಂಗಾವತಿ, 63-ಯಲಬುರ್ಗಾ, 64-ಕೊಪ್ಪಳ, 58-ಸಿಂಧನೂರು, 59- ಮಸ್ಕಿ ಹಾಗೂ 92-ಸಿರಗುಪ್ಪ ವಿಧಾನಸಭಾ ಕ್ಷೇತ್ರಗಳು ಒಳಗೊಂಡಂತೆ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 2045 ಮತಗಟ್ಟೆಗಳಿಗೆ 2435 ಪಿಆರ್ಓ, 2435 ಎಪಿಆರ್ಓ, 4869ಪಿಓ ಮತ್ತು 248 ಎಂಓ ಗಳನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಮಸ್ಟರಿಂಗ್ ಕಾರ್ಯವು ಕುಷ್ಟಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕನಕಗಿರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್, ಗಂಗಾವತಿಯ ಲಯನ್ಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಯಲಬುರ್ಗಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊಪ್ಪಳದ ಗವಿಸಿದ್ದೇಶ್ವರ ಬಿ.ಎಡ್. ಕಾಲೇಜು, ಸಿಂಧನೂರಿನ ಸರ್ಕಾರಿ ಪದವಿ ಕಾಲೇಜು, ಮಸ್ಕಿಯ ದೇವನಾಮ ಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸಿರಗುಪ್ಪದ ಶ್ರೀ ವಿವೇಕಾನಂದ ಪಬ್ಲಿಕ್ ಸ್ಕೂಲ್ಗಳಲ್ಲಿ ಅಚ್ಚುಕಟ್ಟಾಗಿ ಜರುಗಿತು.

ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮಗೆ ನಿಯೋಜಿಸಲಾದ ಮತಗಟ್ಟೆಗಳಿಗೆ ತೆರಳಲು ಸಿದ್ಧತೆ ಮಾಡಿಕೊಳ್ಳುವ ದೃಶ್ಯಗಳು ಮಸ್ಟರಿಂಗ್ ಕೇಂದ್ರದಲ್ಲಿ ಸಾಮಾನ್ಯವಾಗಿತ್ತು.

ಪೆÇಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ: ಚುನಾವಣೆಯು ಶಾಂತರೀತಿಯಿಂದ ನಡೆಸುವ ನಿಟ್ಟಿನಲ್ಲಿ ಜಿಲ್ಲಾ ಪೆÇಲೀಸ್ ಇಲಾಖೆಯಿಂದ ಅಗತ್ಯ ಸಂಖ್ಯೆಯಲ್ಲಿ ನಿಯೋಜಿಸಿರುವ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹ ಆಯಾ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ, ನಿಗದಿಪಡಿಸಿದ ಮತಗಟ್ಟೆಗಳಿಗೆ ತೆರಳಿದರು.


 rajesh pande