ಎರಡನೇ ಹಂತದ ಚುನಾವಣೆ: ನಾಳೆ ಸಾರ್ವತ್ರಿಕ ರಜೆ ಘೋಷಣೆ
ಹೊಸಪೇಟೆ, 06 ಮೇ (ಹಿ.ಸ): ಆ್ಯಂಕರ್ : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಮೇ
ಎರಡನೇ ಹಂತದ ಚುನಾವಣೆ: ನಾಳೆ ಸಾರ್ವತ್ರಿಕ ರಜೆ ಘೋಷಣೆ


ಹೊಸಪೇಟೆ, 06 ಮೇ (ಹಿ.ಸ):

ಆ್ಯಂಕರ್ : ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿದ್ದು, ಮೇ 7ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.

ಮೇ 7ರಂದು ಬಳ್ಳಾರಿ ಲೋಕಸಭಾ ಕ್ಷೇತ್ರ ಸೇರಿ 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ಮೇ 7ರಂದು ನಡೆಯುವ ಚುನಾವಣೆಗೆ ಆಯಾ ಚುನಾವಣಾ ಕ್ಷೇತ್ರಗಳಿಗೆ ಸೀಮಿತಗೊಳಿಸಿ ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.

ಬಳ್ಳಾರಿ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳ ಅರ್ಹ ಮತದಾರರಾಗಿರುವ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನೀತರ ಸಂಸ್ಥೆಗಳಲ್ಲಿ ಖಾಯಂ ಆಗಿ ಆಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾಪ್ರತಿನಿಧಿ ಕಾಯಿದೆ 1951ರ ಕಲಂ 135 ಬಿ ಅಡಿಯಲ್ಲಿನ ಎಲ್ಲ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ. ಮೇ 7ರಂದು ಸಾರ್ವತ್ರಿಕ ರಜೆಯನ್ನು ನಗೋಶಿಯೇಬಲ್ ಇನ್ಸ್ಟ್ರುಮೆಂಟ್ ಕಾಯಿದೆ 1881ರ ಪ್ರಕಾರವು ಸಹ ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ಕೂಡ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿ ತಿಳಿಸಿದ್ದಾರೆ.


 rajesh pande