ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಭೇಟಿ, ಪರಿಶೀಲನೆ
ಹೊಸಪೇಟೆ, 06 ಮೇ (ಹಿ.ಸ): ಆ್ಯಂಕರ್ : ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸ್ಟರಿಂಗ್ ಕೇಂದ್ರವಾದ ಹೊಸಪೇಟೆ ನಗರದ
ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ  ಎಂ.ಎಸ್.ದಿವಾಕರ ಭೇಟಿ ಪರಿಶೀಲನೆ


ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ  ಎಂ.ಎಸ್.ದಿವಾಕರ ಭೇಟಿ ಪರಿಶೀಲನೆ


ಹೊಸಪೇಟೆ, 06 ಮೇ (ಹಿ.ಸ):

ಆ್ಯಂಕರ್ : ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಸ್ಟರಿಂಗ್ ಕೇಂದ್ರವಾದ ಹೊಸಪೇಟೆ ನಗರದ ಸಂಡೂರ ರಸ್ತೆಯಲ್ಲಿರುವ ಎಲ್ಎಫ್ಎಸ್ ಶಾಲಾ ಆವರಣಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು.

ಮತಯಂತ್ರಗಳು ಸೇರಿದಂತೆ ವಿವಿಧ ಚುನಾವಣಾ ಸಾಮಗ್ರಿಗಳ ವಿತರಣೆಗೆ ಸಿದ್ಧತೆ ಮಾಡಿಕೊಂಡ ಮಸ್ಟರಿಂಗ್ ಕೇಂದ್ರದಲ್ಲಿನ ವ್ಯವಸ್ಥೆಯನ್ನು ಇದೆ ವೇಳೆ ಜಿಲ್ಲಾಧಿಕಾರಿಗಳು ಪರಿಶೀಲಿಸಿದರು. ಮಸ್ಟರಿಂಗ್ ಕೇಂದ್ರದಲ್ಲಿ ಊಟದ ಕೌಂಟರನತ್ತ ತೆರಳಿ ಅಲ್ಲಿನ ವ್ಯವಸ್ಥೆಯ ವೀಕ್ಷಣೆ ನಡೆಸಿದರು.

ಕೂಡ್ಲಿಗಿ ಕ್ಷೇತ್ರಕ್ಕೂ ಭೇಟಿ: ಮಧ್ಯಾಹ್ನ ವೇಳೆ ಜಿಲ್ಲಾಧಿಕಾರಿಗಳು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಕ್ಕೆ ತೆರಳಿದರು. ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಯುನಿಟೆಡ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಸ್ಟರಿಂಗ್ ಕೇಂದ್ರದಲ್ಲಿನ ವ್ಯವಸ್ಥೆಯ ವೀಕ್ಷಣೆ ನಡೆಸಿದರು.

ಅಧಿಕಾರಿಗಳು ಸಿಬ್ಬಂದಿಗೆ ಸೂಚನೆ: ಮತಗಟ್ಟೆಗಳಿಗೆ ನಿಯೋಜನೆಗಳೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಯು ಚುನಾವಣಾ ಆಯೋಗದ ನಿರ್ದೇಶನುಸಾರ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಬೇಕು. ಬಿಸಿಲು ಹೆಚ್ಚಿರುವುದರಿಂದ ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಏನಾದರು ಗೊಂದಲಗಳಿದ್ದಲ್ಲಿ ಕೂಡಲೇ ಮೇಲಧಿಕಾರಿಗಳಿಗೆ ಸಂಪರ್ಕಿಸಿ ಸಲಹೆಗಳನ್ನು ಪಡೆದು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಲಹೆ ಮಾಡಿದರು.

ಮತದಾನಕ್ಕೆ ಸುವ್ಯವಸ್ಥೆ: ಇದೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಡಗಲಿ, ಹಗರಿಬೊಮ್ಮನಹಳ್ಳಿ, ವಿಜಯನಗರ, ಕೂಡ್ಲಿಗಿ ಕ್ಷೇತ್ರದಲ್ಲಿ ಹಾಗೂ ದಾವಣಗೆರೆ ಲೋಕಸಭಾ ವ್ಯಾಪ್ತಿಯ ಹರಪನಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 11,28,835 ಮತದಾರರು ಮೇ 7ರಂದು ತಮ್ಮ ಮತ ಹಕ್ಕನ್ನು ಚಲಾಯಿಸಲಿದ್ದಾರೆ. ಇದಕ್ಕಾಗಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿದೆ. ಹಡಗಲಿ ಕ್ಷೇತ್ರದಲ್ಲಿ 1044, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ 1200, ವಿಜಯನಗರ ಕ್ಷೇತ್ರದಲ್ಲಿ 1216, ಕೂಡ್ಲಿಗಿ ಕ್ಷೇತ್ರದಲ್ಲಿ 1200 ಮತ್ತು ಹರಪನಹಳ್ಳಿ ಕ್ಷೇತ್ರದಲ್ಲಿ 1212 ಸೇರಿ ಒಟ್ಟು 5872 ಸಿಬ್ಬಂದಿಯನ್ನು ಚುನಾವಣೆ ಕಾರ್ಯಕ್ಕೆ ನಿಯೋಜಿಸಲಾಗಿದೆ. ಒಟ್ಟು 244 ಮತಗಟ್ಟೆ ಕೇಂದ್ರಗಳಲ್ಲಿ ವೆಬ್ಕ್ಯಾಸ್ಟಿಂಗ್ ಮತ್ತು 267 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಉತ್ಸುಕರಾಗಿ ಹೊಸದಾಗಿ 33,610 ಯುವ ಮತದಾರರು ಮತ್ತು 16,060 ವಿಕಲಚೇತನ ಮತದಾರರು ಮತದಾರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಿದ್ದಾರೆ ಎಂದು ತಿಳಿಸಿದರು.

ಹಡಗಲಿ ಕ್ಷೇತ್ರದಲ್ಲಿ 39, ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ 52, ವಿಜಯನಗರ ಕ್ಷೇತ್ರದಲ್ಲಿ 57, ಕೂಡ್ಲಿಗಿ ಕ್ಷೇತ್ರದಲ್ಲಿ 52 ಮತ್ತು ಹರಪನಹಳ್ಳಿ ಕ್ಷೇತ್ರದಲ್ಲಿ 52 ಸೇರಿ ಒಟ್ಟು 1234 ಮತಗಟ್ಟೆಗಳಿಗೆ 252 ರೂಟಗಳ ಮೂಲಕ ನಿಯೋಜಿಸಿದ ಸಿಬ್ಬಂದಿಗೆ ಮತಗಟ್ಟೆ ಕೇಂದ್ರಗಳಿಗೆ ತೆರಳಲು ಸಾರಿಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತರಾದ ಮಹಮ್ಮದ್ ಅಕ್ರಮ ಅಲಿ ಷಾ, ತಹಸೀಲ್ದಾರ ಶ್ರುತಿ ಹಾಗೂ ಇನ್ನೀತರರು ಇದ್ದರು.


 rajesh pande