ಅರವಿಂದ್ ಕೇಜ್ರಿವಾಲ್ ಗೆ ಮತ್ತೆ ನಿರಾಸೆ, ಮಧ್ಯಂತರ ಜಾಮೀನು ತೀರ್ಪು ಮಂದೂಡಿಕೆ
ನವದೆಹಲಿ, 7 ಮೇ (ಹಿ.ಸ):ಆ್ಯಂಕರ್: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿರುವ ಮುಖ್ಯಮಂತ್ರಿ ಅರವಿಂದ್ ಕ
delhi-liquor-policy-scam-supreme-court-postpone


ನವದೆಹಲಿ, 7 ಮೇ (ಹಿ.ಸ):ಆ್ಯಂಕರ್: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲು ಸೇರಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೋರಾಟ ಕುತೂಹಲ ಹಾಗೇ ಉಳಿದುಕೊಂಡಿದೆ. ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ತೀರ್ಪು ಮೇ.09ಕ್ಕೆ ಮುಂದೂಡಿದೆ.

ಮೇ 3ರಂದು ಆಪ್ ಮುಖ್ಯಸ್ಥ ಕೇಜ್ರಿವಾಲ್ ಸುಪ್ರೀಂ ಕೋರ್ಟ್ಗೆ ಮಧ್ಯಂತರ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯ ‘ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡುವುದರ ಬಗ್ಗೆ ಪರಿಗಣಿಸಬಹುದು ಎಂದಿತ್ತು. ಸರ್ವೋಚ್ಚ ನ್ಯಾಯಾಲಯ ಈ ಅಭಿಪ್ರಾಯ ಕೇಜ್ರಿವಾಲ್ ಹಾಗೂ ಆಪ್ ನಾಯಕರಲ್ಲಿ ಹೊಸ ಹುರುಪು ತುಂಬಿತ್ತು.

ವಿಚಾರಣೆ ಶೀಘ್ರವೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲದಿದ್ದರೆ ಮಧ್ಯಂತರ ಜಾಮೀನನ್ನು ಪರಿಗಣಿಸಬಹುದು’ ಎಂದು ಹೇಳಿ ತನ್ನ ತೀರ್ಪನ್ನು ಮಂಗಳವಾರಕ್ಕೆ ಮುಂದೂಡಿಕೆ ಮಾಡಿತ್ತು. ಇಂದು ವಿಟಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದೀಗ ಪ್ರಕರಣವನ್ನು ಮೇ.09ಕ್ಕೆ ಮುಂದೂಡಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 21ರಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಜಾಮೀನಿಗಾಗಿ ನಡೆಸಿದ ಹಲವು ಕಸರತ್ತುಗಳು ವಿಫಲಗೊಂಡಿತ್ತು.

ಹಿಂದೂಸ್ತಾನ್ ಸಮಾಚಾರ್


 rajesh pande