ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಬೆಂಗಳೂರು, 7 ಮೇ (ಹಿ.ಸ):ಆ್ಯಂಕರ್:ಏಪ್ರಿಲ್ ತಿಂಗಳಿಡೀ ಬೇಸಗೆಯ ಬೇಗೆಯಿಂದ ಬಸವಳಿದಿದ್ದ ಬೆಂಗಳೂರು ಜನತೆಗೆ
ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ


ಬೆಂಗಳೂರು, 7 ಮೇ (ಹಿ.ಸ):ಆ್ಯಂಕರ್:ಏಪ್ರಿಲ್ ತಿಂಗಳಿಡೀ ಬೇಸಗೆಯ ಬೇಗೆಯಿಂದ ಬಸವಳಿದಿದ್ದ ಬೆಂಗಳೂರು ಜನತೆಗೆ ಕೊನೆಗೂ ಮಳೆ ತಂಪೆರೆದಿದೆ. ಕಳೆದ ಗುರುವಾರ, ಶುಕ್ರವಾರ ಹಾಗೂ ಸೋಮವಾರ ನಗರದಲ್ಲಿ ಮಳೆಯಾಗಿದ್ದು, ವಾತಾವರಣ ತುಸು ತಣ್ಣಗಾಗಿದೆ. ಈ ಮಧ್ಯೆ, ಮೇ 10ರ ವರೆಗೂ ಬೆಂಗಳೂರಿನಲ್ಲಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ನಗರದ ಹಲವೆಡೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿದ್ದು, ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿತ್ತು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್ಎನ್ಡಿಎಂಸಿ) ಅಂಕಿಅಂಶಗಳ ಪ್ರಕಾರ, ರಾತ್ರಿ 9 ಗಂಟೆಯ ಹೊತ್ತಿಗೆ ರಾಜಮಹಲ್ ಗುಟ್ಟಹಳ್ಳಿಯಲ್ಲಿ ಗರಿಷ್ಠ 39.5 ಮಿಮೀ ಮಳೆಯಾಗಿದ್ದು, ನಂತರದ ದಯಾನಂದ ನಗರದಲ್ಲಿ (32.5 ಮಿಮೀ) ಮಳೆಯಾಗಿದೆ. ನಗರದ 18 ವಾರ್ಡ್ಗಳಲ್ಲಿ 10 ಮಿಮೀಗೂ ಹೆಚ್ಚು ಮಳೆಯಾಗಿದೆ.

ವಲಯವಾರು ನೋಡುವುದಾದರೆ ಬೊಮ್ಮನಹಳ್ಳಿಯಲ್ಲಿ ಗರಿಷ್ಠ ಮಳೆಯಾಗಿದ್ದು, ಯಲಹಂಕದಲ್ಲಿ ಅತಿ ಕಡಿಮೆ ಮಳೆಯಾಗಿದೆ. ಮಧ್ಯಾಹ್ನದ ವೇಳೆಗೆ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ತಾಪಮಾನ ತುಲನಾತ್ಮಕವಾಗಿ ಕಡಿಮೆ ಇತ್ತು.

ಹಿಂದೂಸ್ತಾನ್ ಸಮಾಚಾರ್


 rajesh pande